Ad Widget .

ನಟ ದರ್ಶನ್ ರಿಂದ ಕ್ಷಮಾಪಣೆ| ದೃಶ್ಯ ಮಾಧ್ಯಮಗಳಿಂದ ಬಹಿಷ್ಕಾರ ತೆರವು

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್ ಸ್ಟಾರ್ ಡಿ ಬಾಸ್ ದರ್ಶನ್ ಹಾಗೂ ಮೀಡಿಯಾ ಮಧ್ಯೆ ಇರುವ ಮುನಿಸು ಸ್ವಲ್ಪ ದೀರ್ಘವೇ ಆಗಿತ್ತು. ಮೀಡಿಯಾ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಇದ್ದಂತಹ ಕಹಿ ಮುನಿಸು ಕೊನೆಗೂ ಎಂಡ್ ಆಗಿದೆ. ಅಂತೂ ಚಾಲೆಂಜಿಂಗ್ ಸ್ಟಾರ್ ಈ ಬಗ್ಗೆ ಕ್ಷಮೆ ಕೇಳಿದ್ದು ಮಾಧ್ಯಮ ಮಂದಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

Ad Widget . Ad Widget .

ದರ್ಶನ್ ಇನ್​ಸ್ಟಾಗ್ರಾಮ್​ನಲ್ಲಿ ಸ್ಪೆಷಲ್ ಪೋಸ್ಟ್ ಶೇರ್ ಮಾಡಿದ್ದು ಅದಕ್ಕೆ ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಕ್ಯಾಪ್ಶನ್ ಬರೆದಿದ್ದಾರೆ. ಇದರೊಂದಿಗೆ ಒಂದು ಪತ್ರದ ಫೋಟೋ ಕೂಡಾ ಶೇರ್ ಮಾಡಿದ್ದಾರೆ.

Ad Widget . Ad Widget .

ನನ್ನ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮದ ಅಗತ್ಯವಿದೆ.

ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮದ ಪ್ರೀತಿಯಿಂದ ನೀಡಿದ ಪ್ರಚಾರ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ ಎಂದು ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *