Ad Widget .

ಸೌಜನ್ಯಳ ನ್ಯಾಯಕ್ಕಾಗಿ ಆ.31ರಂದು ಕುಕ್ಕೆಯಲ್ಲಿ ಮೌನ ಮೆರವಣಿಗೆ| ಸುಬ್ರಹ್ಮಣ್ಯನ ಪುರದತ್ತ ಮಹೇಶ್ ತಿಮರೋಡಿ, ಸೌಜನ್ಯ ತಾಯಿ‌ ಕುಸುಮಾವತಿ

ಸಮಗ್ರ ನ್ಯೂಸ್: ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ನಡೆಯಲಿದೆ ಎಂದು ಸುಬ್ರಹ್ಮಣ್ಯ ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿದೆ ಎಂದು ಸಮಿತಿಯ ಡಾl ರವಿ ಕಕ್ಕೆಪದವು ತಿಳಿಸಿದ್ದಾರೆ.

Ad Widget . Ad Widget .

ಅವರು ಆ.27 ರಂದು ಸುಬ್ರಹ್ಮಣ್ಯದಲ್ಲಿ ಮಾತನಾಡಿದ ಅವರು ಪಾದಯಾತ್ರೆಯು ದೇವಸ್ಥಾನದವರೆಗೆ ಸಾಗಿ ಅಲ್ಲಿ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಸಭೆ ನಡೆಯಲಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಮತ್ತಿತರರು ಭಾಗವಹಿಸುವರು ಎಂದವರು ತಿಳಿಸಿದರು.

Ad Widget . Ad Widget .

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ, ರವಿಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿಸಲಿದ್ದಾರೆ ಎಂದರು.

Leave a Comment

Your email address will not be published. Required fields are marked *