Ad Widget .

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್| ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

Ad Widget . Ad Widget .

ಜಕ್ರಿಬೆಟ್ಟು ಎಂಬಲ್ಲಿನ‌ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ವ್ಯಕ್ತಿಯೋರ್ವ ಗೋಡೆಯ ಸಂದಿ ಮಧ್ಯೆ ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ, ಈ ಸಂದರ್ಭ ಅಪರಿಚಿತ ಆರೋಪಿ ಓಡಿಹೋಗಿದ್ದಾನೆ. ಬಳಿಕ ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *