ಸಮಗ್ರ ನ್ಯೂಸ್: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಅನ್ವಯವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಈ ಯೋಜನೆಯ ವ್ಯಾಪ್ತಿಗೆ ಬರುತ್ತಾರೆಯೇ ಇಲ್ಲವೇ ಎಂಬ ಗೊಂದಲ ಇತ್ತು. ಅವರು ಕೂಡ ಯೋಜನೆಗೆ ಒಳಪಡುತ್ತಾರೆ’ ಎಂದು ಹೇಳಿದರು.
ಸರ್ಕಾರದ ಭಾಗವಾಗಿ ಕೆಲಸ ಮಾಡುವ ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಎಂದು ಗುರುತಿಸಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು ಯೋಜನೆಗೆ ಅರ್ಜಿ ಹಾಕಿರಲಿಲ್ಲ. ಸಚಿವರು, ನಮಗೂ ಅನ್ವಯವಾಗುತ್ತದೆ ಎಂದು ಹೇಳುವ ಮೂಲಕ ಗೊಂದಲ ನಿವಾರಿಸಿದ್ದಾರೆ.
ಯೋಜನೆಗೆ ನಾಳೆ(ಆ.30) ಅಧಿಕೃತ ಚಾಲನೆ ದೊರೆಯಲಿದ್ದು, ಮೈಸೂರಿನಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಈ ಮೂಲಕ ನಾಳೆ ಮನೆಯ ಯಜಮಾನಿ ಖಾತೆಗೆ ₹2000 ಜಮೆ ಆಗಲಿದೆ.