Ad Widget .

ಸುಳ್ಯ:ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ| ಸ್ಥಳಕ್ಕೆ ಕಾಂಗ್ರೆಸ್ ಮುಖಂಡರಿಂದ ಭೇಟಿ ಪರಿಶೀಲನೆ

ಸಮಗ್ರ ನ್ಯೂಸ್:ಮೈಸೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸರಕಾರದ ಮಹಾತ್ವಕಾಂಕ್ಷಿ ಮಹಿಳಾ ಸಬಳೀಕರಣ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಆ. 30ರಂದು ರಾಜ್ಯಾದ್ಯಂತ ನಡೆಯಲಿದೆ.

Ad Widget . Ad Widget .

ಎಐಸಿಸಿ ನಾಯಕರು, ಮುಖ್ಯಮಂತ್ರಿಗಳು, ಉಪ-ಮುಖ್ಯಮಂತ್ರಿ ಹಾಗೂ ಸಚಿವರುಗಳ ನೇತೃತ್ವದಲ್ಲಿ ಉದ್ಘಾಟನೆಗೊಳ್ಳಲಿದೆ. ಈ ಕಾರ್ಯಕ್ರಮವು ರಾಜ್ಯದಾದ್ಯಂತ ಸುಮಾರು 11 ಸಾವಿರ ಕಡೆಗಳಲ್ಲಿ ಏಕ ಕಾಲದಲ್ಲಿ ನೇರಪ್ರಸಾರಗೊಳ್ಳಲಿದೆ. ಸುಳ್ಯ ನಗರಪಂಚಾಯತ್ ವ್ಯಾಪ್ತಿಯ ಮುಖ್ಯ ಕಾರ್ಯಕ್ರಮ ಸುಳ್ಯದ ಲಯನ್ಸ್ ಸಭಾಭವನದಲ್ಲಿ ನಡೆಯಲಿದೆ.

Ad Widget . Ad Widget .

ಸುಳ್ಯದ ನಗರ ಪಂಚಾಯತ್ ಕಚೇರಿಯಲ್ಲಿ ಆ. 29ರಂದು ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ, ಮಾಜಿ ನಗರ ಪಂಚಾಯತ್ ಅಧ್ಯಕ್ಷ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದಿನ್, ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷ ಗೋಕುಲ್ ದಾಸ್, ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತ ಹಾಗೂ ನಗರ ಪಂಚಾಯತ್ ಮುಖ್ಯಧಿಕಾರಿ ಸುಧಾಕರ್ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂದು(ಆ. 29) ನಡೆದ ಕಾರ್ಯಕ್ರಮದ ಪೂರ್ವ ತಯಾರಿಯನ್ನು ಜೂಮ್ ಮುಖಾಂತರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಎಂ.ವೆಂಕಪ್ಪ ಗೌಡ ಹಾಗೂ ಸುಳ್ಯದ ಮುಖಂಡರೊಂದಿಗೆ ನೇರಪ್ರಸಾರದ ಮೂಲಕ ಮಾತುಕತೆ ನಡೆಸಿ ಕಾರ್ಯಕ್ರಮದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಭವಾನಿಶಂಕರ್ ಕಲ್ಮಡ್ಕ, ಚೇತನ್ ಕಜೆಗದ್ದೆ, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಮಾಜಿ ನಗರ ಪಂಚಾಯತ್ ಸದಸ್ಯೆ ಶ್ರೀಲತಾ ಕುರುಂಜಿ ಗುಡ್ಡೆ, ರಾಜು ಪಂಡಿತ್, ವಿಜಯ ಕುಮಾರ್ ಆಲೆಟ್ಟಿ, ಹರೀಶ್ ಕೊಡಪಾಲ, ಇಬ್ಬು ಜಯನಗರ, ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ, ಜಯಲಕ್ಷ್ಮಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *