Ad Widget .

ಬೆಳ್ತಂಗಡಿ: ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆ, ಕುಸುಮಾವತಿ ವಿರುದ್ದ ಆಕ್ಷೇಪಾರ್ಹ ಪೋಸ್ಟಿಂಗ್| ಪ್ರತ್ಯೇಕ ದೂರು ದಾಖಲು

ಸಮಗ್ರ ನ್ಯೂಸ್: ವಾಟ್ಸಾಪ್ ಗ್ರೂಪ್ ಒಂದರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳೂ ಆಗಿರುವ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಅಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವುದು ಕಂಡುಬಂದಿದೆ.

Ad Widget . Ad Widget .

ಈ ಹಿನ್ನೆಲೆಯಲ್ಲಿ ಸುರೇಶ್ ರಾಜ್ ಎಂಬಾತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 505(1)(ಬಿ),509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Ad Widget . Ad Widget .

ಧರ್ಮಸ್ಥಳದ ಮಣ್ಣಸಂಕದಲ್ಲಿ ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾರವರ ತಾಯಿ ಕುಸುಮಾವತಿಯವರನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಅಕ್ಷೇಪಾರ್ಹ ಕಮೆಂಟ್ ಹಾಕಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ರಾಘವೇಂದ್ರ ಭಟ್ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 509 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *