ಮಂಗಳೂರು: ಫೂಟ್ ಬೋರ್ಡ್ ನಿಂದ ಬಿದ್ದು ನಿರ್ವಾಹಕ ದುರ್ಮರಣ

ಸಮಗ್ರ ನ್ಯೂಸ್: ಖಾಸಗಿ ಬಸ್ಸಿನ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದ ಘಟನೆ ನಗರದ ನಂತೂರು ವೃತ್ತದ ಬಳಿ ನಡೆದಿದೆ.

Ad Widget ... ..

ಕಂಡಕ್ಟರ್ ಹೀರಯ್ಯ (23)ಮೃತಪಟ್ಟ ಯುವಕ. ಕಾಟಿಪಳ್ಳದಿಂದ ನಂತೂರು ಸರ್ಕಲ್ ಆಗಿ ಮಂಗಳಾದೇವಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಮುಂಭಾಗದ ಫೂಟ್ ಬೋರ್ಡ್ ನಲ್ಲಿ ನಿಂತಿದ್ದ ಕಂಡಕ್ಟರ್ ಆಯತಪ್ಪಿ ಕೆಳಗೆ ಬಿದ್ದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ತಕ್ಷಣ ಹೀರಯ್ಯ ಅವರನ್ನು ಸಂಚಾರ ಗಸ್ತಿನಲ್ಲಿದ್ದ ಪೊಲೀಸ್‌ ಸಿಬ್ಬಂದಿ ಮತ್ತು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *