Ad Widget .

ಬಂಟ್ವಾಳ: ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ 19ರ ಯುವತಿ

ಸಮಗ್ರ ನ್ಯೂಸ್: ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಬಂಟ್ವಾಳದ ಕಾವಳಪಡೂರು ಗ್ರಾಮದಲ್ಲಿ ಸಂಭವಿಸಿದೆ. ಇಲ್ಲಿನ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟ ದುರ್ದೈವಿ.

Ad Widget . Ad Widget .

ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ.

Ad Widget . Ad Widget .

ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಮಿತ್ರಾ ಅವರು ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

Leave a Comment

Your email address will not be published. Required fields are marked *