ಚಿಕ್ಕಮಗಳೂರು : ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಳೆ ಕೊರತೆಯಿಂದ ಸಂಪೂರ್ಣ ಹಾಳಾದ ಈರುಳ್ಳಿ ಬೆಳೆ ನಾಶವಾಗಿದ್ದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಆ.31 ರಂದು ನಡೆದಿದೆ.

Ad Widget ... ..

ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಸತೀಶ್ (48), ಈರುಳ್ಳಿ ಬೆಳೆಗಾಗಿ ಕೈ ಸಾಲವನ್ನೂ ಮಾಡಿದ್ದ ಮತ್ತು ಸಹಕಾರ ಸಂಘದಲ್ಲಿ 1 ಲಕ್ಷದ 30 ಸಾವಿರ ಸಾಲ ಮಾಡಿದ್ದು, ತಾಯಿ ಹೆಸರಲ್ಲಿ 1 ಲಕ್ಷ ಸಾಲ ಪಡೆದುಕೊಂದಿದ್ದ.

Ad Widget

ಮಳೆ ಇಲ್ಲದ ಒಣಗಿ ಹೋದ ಈರುಳ್ಳಿ ಬೆಳೆಯಿಂದ, ಮ ಸಾಲ ತೀರಿಸಲು ಸಾಧ್ಯವಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *