Ad Widget .

ಸುಳ್ಯ: ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸ್ಮರಣ ಸಂಚಿಕೆ “ಬೆಳ್ಳಿ ಬರಹ” ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಹೊರ ತಂದ “ಬೆಳ್ಳಿ ಬರಹ” ಸ್ಮರಣ ಸಂಚಿಕೆಯನ್ನು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೆವಿಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಆ. 31ರಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು.

Ad Widget . Ad Widget .

ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕೊರತ್ತೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮತ್ತು ಪ್ರೆಸ್ ಕ್ಲಬ್ ನಿರ್ದೇಶಕ ಯಶ್ವಿತ್ ಕಾಳಮನೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸ್ಮರಣ ಸಂಚಿಕೆ ಪ್ರಧಾನ ಸಂಪಾದಕ ಜೆ.ಕೆ. ರೈ ಪ್ರಾಸ್ತಾವಿಕ ಮಾತನಾಡಿದರು.

Ad Widget . Ad Widget .

ಈ ಸಂದರ್ಭದಲ್ಲಿ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಗಂಗಾಧರ ಮಟ್ಟಿ, ಪ್ರಧಾನ ಕಾರ್ಯದರ್ಶಿ ದುರ್ಗಾಕುಮಾರ್ ನಾಯರ್ ಕೆರೆ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಕೇರ್ಪಳ ಸ್ವಾಗತಿಸಿ, ಕೋಶಾಧಿಕಾರಿ ದಯಾನಂದ ಕಲ್ನಾರ್ ವಂದಿಸಿ, ಜಿಲ್ಲಾ ಸಂಘದ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *