August 2023

ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿ 300 ಅಡಿ ಆಳಕ್ಕೆ ಬಿದ್ದು ಸಾವು

ಸಮಗ್ರನ್ಯೂಸ್:ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿಯೊಬ್ಬರು 300 ಅಡಿ ಆಳಕ್ಕೆ ಬಿದ್ದು ಆ. 18ರಂದು ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಪವಿತ್ರ ಅಮರನಾಥ (Amaranata) ಗುಹೆಯಿಂದ ಹಿಂತಿರುಗುತ್ತಿದ್ದಾಗ ಕಾಳಿಮಾತಾ ಬಳಿ ಜಾರಿ 300 ಅಡಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರದ ರೋಹ್ತಾಸ್ ಜಿಲ್ಲೆಯ ತುಂಬ ಗ್ರಾಮದ ನಿವಾಸಿ ವಿಜಯ್ ಕುಮಾರ್ ಶಾ(50) ಎಂದು ಎಂದು ಗುರುತಿಸಲಾಗಿದೆ. ವಿಜಯ್ ಕುಮಾರ್ ಶಾ ಮಮತಾ ಕುಮಾರಿ ಎಂಬಾವರೊಂದಿಗೆ ಪವಿತ್ರ ಗುಹೆಯಿಂದ ಹಿಂತಿರುಗುತ್ತಿದ್ದಾಗ ಕಾಳಿಮಾತೆಯ ಬಳಿ ಕಾಲು […]

ಅಮರನಾಥ ಯಾತ್ರೆಗೆ ಹೊರಟಿದ್ದ ಯಾತ್ರಾರ್ಥಿ 300 ಅಡಿ ಆಳಕ್ಕೆ ಬಿದ್ದು ಸಾವು Read More »

ಕರ್ನಾಟಕದಲ್ಲಿ ನಿರ್ಮಾಣವಾಗಲಿದೆ ಮತ್ತೊಂದು ಗಾಜಿನ ಸೇತುವೆ| ಪ್ರವಾಸೋದ್ಯಮ ಇಲಾಖೆಯಿಂದ ಹೊಸ ಯೋಜನೆಗೆ ತಯಾರಿ

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರವಾಸೋದ್ಯಮ ಇಲಾಖೆಯು ಗಾಜಿನ ಸೇತುವೆ ನಿರ್ಮಾಣ ಮಾಡಲು ನಿರ್ಧರಿಸಿದೆ. ಮಳೆ ಬೀಳಲು ಆರಂಭಿಸಿದರೆ ಸಾಕು ಕಾಫಿನಾಡಿಗೆ ಪ್ರವಾಸ ಹೊರಡುವುದು ಸಹಜ. ಆದರೆ, ಹೀಗೆ ಹೊರಟವರು ಬಹುತೇಕರು ಮುಳ್ಳಯ್ಯನಗರಿಗೆ ಹೋಗುತ್ತಾರೆ. ಆದ್ದರಿಂದ ಪ್ರವಾಸೋದ್ಯಮ ಇಲಾಖೆ ಅಂತಹದ್ದೇ ಇನ್ನೊಂದು ಬ್ಯೂಟಿಫುಲ್‌ ಪ್ರವಾಸಿ ತಾಣವನ್ನು ಪರಿಚಯಿಸುವ ಕೆಲಸಕ್ಕೆ ಮುಂದಾಗಿದೆ. ಅದುವೇ ಪಶ್ಚಿಮ ಘಟ್ಟದ ಆರಂಭಿಕ ಪಾಯಿಂಟ್‌ ಎನಿಸಿಕೊಂಡಿರುವ “ರಾಣಿ ಝರಿ ವೀವ್‌ ಪಾಯಿಂಟ್‌”. ರಾಣಿ ಝರಿಯು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ,

ಕರ್ನಾಟಕದಲ್ಲಿ ನಿರ್ಮಾಣವಾಗಲಿದೆ ಮತ್ತೊಂದು ಗಾಜಿನ ಸೇತುವೆ| ಪ್ರವಾಸೋದ್ಯಮ ಇಲಾಖೆಯಿಂದ ಹೊಸ ಯೋಜನೆಗೆ ತಯಾರಿ Read More »

ಬೆಂಗಳೂರು: ರೈಲಿನಲ್ಲಿ ಅಗ್ನಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟ ಹೊಗೆ

ಸಮಗ್ರ ನ್ಯೂಸ್: ಬೆಂಗಳೂರಿನ ಮೆಜೆಸ್ಟಿಕ್‌ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ. ಮುಂಬೈನಿಂದ ಈ ರೈಲು ಬೆಳಗ್ಗೆ 6.30 ಕ್ಕೆ ಮೆಜೆಸ್ಟಿಕ್ ನಿಲ್ದಾಣಕ್ಕೆ ಆಗಮಿಸಿತ್ತು. ಬಂದು ನಿಂತ ಎರಡು ಗಂಟೆಗಳ ಬಳಿಕ ಎಂಜಿನ್‌ನಿಂದ ಐದನೇ ಬೋಗಿಯಲ್ಲಿ ಸ್ಲೀಪರ್ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಬಂದಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತರ ಬೆಂಕಿಗೆ ಗುರಿಯಾಗಿದ್ದ

ಬೆಂಗಳೂರು: ರೈಲಿನಲ್ಲಿ ಅಗ್ನಿ ಅವಘಡ, ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟ ಹೊಗೆ Read More »

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ‌ ಲೆಕ್ಕಾಧಿಕಾರಿ

ಸಮಗ್ರ ನ್ಯೂಸ್: ಹಕ್ಕು ಖುಲಾಸೆಗೆ ಸಂಬಂಧಿಸಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಅರಂತೋಡು ಗ್ರಾಮ ಆಡಳಿತಾಧಿಕಾರಿಯು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ಅಡ್ತಲೆ ಹರಿಪ್ರಸಾದ್‌ ಅವರು ಹಕ್ಕು ಖುಲಾಸೆಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕಡತ ವಿಲೇಗಾಗಿ ಅರಂತೋಡು ಗ್ರಾಮ ಲೆಕ್ಕಾಧಿಕಾರಿಯಾಗಿರುವ ಮಿಯಾಸಾಬ್ ಮುಲ್ಲಾ ೮ ಸಾವಿರದ ಬೇಡಿಕೆ ಇಟ್ಟರೆಂದೂ ತಿಳಿದಿದೆ. ಇಂದು ಹಣ ಸ್ವೀಕರಿಸುತ್ತಿದ್ದಾಗ ಅವರು ಲೋಕಾಯುಕ್ತ ದಾಳಿ ನಡೆದಿದ್ದು, ಸಿಕ್ಕಿ ಬಿದ್ದಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ‌ ಲೆಕ್ಕಾಧಿಕಾರಿ Read More »

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು

ಸಮಗ್ರ ನ್ಯೂಸ್:ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಅದರೊಂದಿಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾಕಷ್ಟು ಕೆಲಸ ಮಾಡಲಾಗುತ್ತಿದೆ. ಆದರೆ ನೀವು ದಿನಕ್ಕೆ ಎಷ್ಟು ಬಾರಿ ಚಾರ್ಜ್ ಮಾಡುತ್ತಿದ್ದೀರಿ ಎಂಬುದನ್ನು ಎಂದಾದರು ಗಮನಿಸಿದ್ದೀರಾ? ಅತಿಯಾಗಿ ಮೊಬೈಲ್ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾಳಾಗಬಹುದು. ಮತ್ತು ಕಡಿಮೆ ಚಾರ್ಜ್ ಮಾಡುವುದರಿಂದ ಬ್ಯಾಟರಿ ಹಾನಿಗೋಳಗಾಗಬಹುದು. ಹಗಲಿನಲ್ಲಿ ಪದೇ ಪದೇ ಫೋನ್ ಚಾರ್ಜ್ ಮಾಡುವ ಅಭ್ಯಾಸವನ್ನು ಇಂದೇ ನಿಲ್ಲಿಸಿ. ಒಂದೆಡೆ ಬ್ಯಾಟರಿ (Smartphone Battery) ಖಾಲಿಯಾದ ಕಾರಣ ಫೋನ್ ಬಳಸಲಾಗುವುದಿಲ್ಲ, ಆದರೆ

ಪದೇ ಪದೇ ಮೊಬೈಲ್ ಚಾರ್ಜ್ ಮಾಡ್ತೀರ?! ಹಾಗಿದ್ರೆ ನೀವು ಇದನ್ನು ಓದಲೇಬೇಕು Read More »

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ| ಇನ್ನೆರಡು ದಿನ ಉತ್ತಮ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯ ಹಲವೆಡೆ ಶುಕ್ರವಾರ (ಆಗಸ್ಟ್ 18) ಸಂಜೆಯ ಬಳಿಕ ಗುಡುಗು ಸಹಿತ ಮಳೆಯಾಗಿದ್ದು, ಮತ್ತೆ ಬಿರುಸಿನ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಳೆಯ ಮುನ್ಸೂಚನೆಯನ್ನೂ ನೀಡಿತ್ತು. ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯಲ್ಲಿ ಅಲ್ಲಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಸಮುದ್ರದಲ್ಲೂ

ಹವಾಮಾನ ವರದಿ| ಕರಾವಳಿಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ| ಇನ್ನೆರಡು ದಿನ ಉತ್ತಮ ಮಳೆ ಮುನ್ಸೂಚನೆ Read More »

ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ

ಸಮಗ್ರ ನ್ಯೂಸ್: ‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು

ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ Read More »

ಮಂಗಳೂರು: ಈರುಳ್ಳಿ ದರದಲ್ಲಿ ದಿಢೀರ್ ಏರಿಕೆ| ಗ್ರಾಹಕರ ಕಣ್ಣಲ್ಲಿ ಕಣ್ಣೀರು

ಸಮಗ್ರ ನ್ಯೂಸ್: ಟೊಮೆಟೊ ದರ ಕ್ರಮೇಣ ಇಳಿಮುಖವಾಗುತ್ತಿದ್ದಂತೆ ಇದೀಗ ಈರುಳ್ಳಿ ದರ ಗಗನಮುಖಿಯಾಗತೊಡಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಿಂದ ಪೂರೈಕೆ ಕಳೆದ ಎರಡು ವಾರಗಳಿಂದ ಕಡಿಮೆಯಾಗಿದೆ. ಹೀಗಾಗಿ ಈರುಳ್ಳಿ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಮೂಲಗಳು ತಿಳಿಸಿವೆ. ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಕಳೆದ ವಾರ ಕ್ವಿಂಟಲ್‌ಗೆ 2000 ರೂ.ಗೆ ತಲುಪಿತ್ತು. ಇದೀಗ 2900

ಮಂಗಳೂರು: ಈರುಳ್ಳಿ ದರದಲ್ಲಿ ದಿಢೀರ್ ಏರಿಕೆ| ಗ್ರಾಹಕರ ಕಣ್ಣಲ್ಲಿ ಕಣ್ಣೀರು Read More »

ಸೌಜನ್ಯ ಪ್ರಕರಣ ಮರುತನಿಖೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಕಾನೂನಾತ್ಮಕವಾಗಿ ಮುಗಿದ ಅಧ್ಯಾಯ| ಸಂಚಲನ ಸೃಷ್ಟಿಸಿದ ಗೃಹಸಚಿವ ಪರಮೇಶ್ವರ್ ಹೇಳಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸಮೀಪದ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ಸಂಭವಿಸಿದ ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣವನ್ನು ಮರು ತನಿಖೆಗೊಳಪಡಿಸಲು ತೀವ್ರ ಹೋರಾಟ ನಡೆಯುತ್ತಿರುವಾಗಲೇ ಸರಕಾರ ಮರು ತನಿಖೆ ಅಸಾಧ್ಯ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ. ಪರಮೇಶ್ವರ, ಈ ಪ್ರಕರಣ ಕಾನೂನಾತ್ಮಕವಾಗಿ ಮುಗಿದು ಹೋಗಿದೆ. ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ವಿವಿಧ ವೇದಿಕೆಗಳಲ್ಲಿ ಹರಡುತ್ತಿರುವ ಎಲ್ಲ

ಸೌಜನ್ಯ ಪ್ರಕರಣ ಮರುತನಿಖೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ, ಕಾನೂನಾತ್ಮಕವಾಗಿ ಮುಗಿದ ಅಧ್ಯಾಯ| ಸಂಚಲನ ಸೃಷ್ಟಿಸಿದ ಗೃಹಸಚಿವ ಪರಮೇಶ್ವರ್ ಹೇಳಿಕೆ Read More »

ಸೌಜನ್ಯ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ| ಕೇಸು ದಾಖಲಿಸಿಕೊಂಡ ಆಯೋಗ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಾಳ ಅತ್ಯಾಚಾರ ಹಾಗೂ ಹತ್ಯಾ ಪ್ರಕರಣದಲ್ಲಿ ಸೌಜನ್ಯಾಳ ಕುಟುಂಬ ಹಾಗೂ ನಿರಪರಾಧಿಯಾದರೂ ಶಿಕ್ಷೆಗೊಳಗಾಗಿದ್ದ ಸಂತೋಷ್‌ ರಾವ್ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ಮುಖಂಡ ನಾಗೇಶ್ ಅಂಗೀರಸ ಬರೆದ ಪತ್ರದ ಆಧಾರದಲ್ಲಿ ರಾಜ್ಯ ಮಾನವ ಹಕ್ಕು ಆಯೋಗ ಕೇಸು ದಾಖಲಿಸಿಕೊಂಡಿದೆ. ಸೌಜನ್ಯಾಳ ಪ್ರಕರಣದ ಕುರಿತು ನೀಡಿದ ದೂರಿನ ಕುರಿತಂತೆ ಕೇಸು ನಂ. 2675/10/19/2023ನ್ನು ದಾಖಲಿಸಿಕೊಳ್ಳ ಲಾಗಿದೆ ಎಂದು ಕರ್ನಾಟಕ

ಸೌಜನ್ಯ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗ ಎಂಟ್ರಿ| ಕೇಸು ದಾಖಲಿಸಿಕೊಂಡ ಆಯೋಗ Read More »