August 2023

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ

ಸಮಗ್ರ‌ ನ್ಯೂಸ್: ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಸರಕಾರವು ನಿರೀಕ್ಷೆಯಂತೆಯೇ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ವಿರುದ್ಧ ಗೆಲುವು ದಾಖಲಿಸಿದೆ. ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ವಿರೋಧ ಪಕ್ಷಗಳು ಲೋಕಸಭೆಯಿಂದ ಸಭಾತ್ಯಾಗ ಮಾಡಿವೆ. ಇದಕ್ಕೆ ಪ್ರತಿಯಾಗಿ, “ಅವರು ನಮ್ಮನ್ನು ತೆಗಳುತ್ತಾರೆ. ಆದರೆ, ಅವರಿಗೆ ನಮ್ಮ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ದೇಶದ […]

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು| ಗೆದ್ದು ಬೀಗಿದ ಮೋದಿ‌ ಸರ್ಕಾರ Read More »

ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ

ಸಮಗ್ರ ನ್ಯೂಸ್:ಪಾದಚಾರಿಗೆ ಸ್ಕೂಟಿ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಕಲ್ಲುಗುಂಡಿಯಲ್ಲಿ ಆ. 10ರಂದು ನಡೆದಿದ್ದು, ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾಗಿ ತಿಳಿದುಬಂದಿದೆ. ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುವ ವಿಶ್ವನಾಥ್ ಎಂಬವರು ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಬಂದ ಸ್ಕೂಟಿ ಗುದ್ದಿದ್ದು, ಅಪಘಾತದಿಂದ ವಿಶ್ವನಾಥ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸಂಪಾಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ಸುಳ್ಯಕ್ಕೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಸ್ಕೂಟಿ

ಕಲ್ಲುಗುಂಡಿ: ಹಿಟ್ ಆ್ಯಂಡ್ ರನ್; ಪಾದಚಾರಿ ಗಂಭೀರ Read More »

ಬಿಜೆಪಿ ಬೆಂಬಲದಿಂದ ಗ್ರಾ.ಪಂ ಅಧ್ಯಕ್ಷ ಸ್ಥಾನ ಗೆದ್ದ ಎಸ್ಡಿಪಿಐ| ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಬಿಜೆಪಿಗರು!!

ಸಮಗ್ರ ನ್ಯೂಸ್: ಮಂಗಳೂರು ತಾಲೂಕಿನ ತಲಪಾಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಎಸ್‌ಡಿಪಿಐ ಬೆಂಬಲಿತ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ, ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಉಪಾಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಬೆಂಬಲಿತರು ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸತ್ಯರಾಜ್‌ ಪರಾಭವಗೊಂಡರು. ಪಂಚಾಯಿತಿಯಲ್ಲಿ ಒಟ್ಟು 24 ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, ಒಬ್ಬರು ಕಾಂಗ್ರೆಸ್‌ ಹಾಗೂ 10 ಎಸ್‌ಡಿಪಿಐ ಬೆಂಬಲಿತರು ಇದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ.

ಬಿಜೆಪಿ ಬೆಂಬಲದಿಂದ ಗ್ರಾ.ಪಂ ಅಧ್ಯಕ್ಷ ಸ್ಥಾನ ಗೆದ್ದ ಎಸ್ಡಿಪಿಐ| ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ ಬಿಜೆಪಿಗರು!! Read More »

ಕಡಬ: ಗ್ರಾಮಸಭೆಯಲ್ಲಿ ಹೀಗಾ ಪ್ರಶ್ನೆ ಕೇಳೋದು!? ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುತ್ತಾ ಕುಸಿದು ಬಿದ್ದ ವೈದ್ಯೆ!!

ಸಮಗ್ರ ನ್ಯೂಸ್: ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುವ ವೇಳೆ ವೈದ್ಯಾಧಿಕಾರಿಯೊಬ್ಬರು ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮ ಸಭೆಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆಯಲ್ಲಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ.ಶಿಶಿರ ಅವರು ಇಲಾಖೆಯ ಮಾಹಿತಿ ನೀಡುತ್ತಿದ್ದರು. ಈ ವೇಳೆ ಗ್ರಾಮಸ್ಥ ಡೀಕಯ್ಯ ಪೂಜಾರಿ ಅವರು, ‘ಕಳೆದ ಏಪ್ರಿಲ್‌ನಲ್ಲಿ ಗೋಳಿತ್ತೊಟ್ಟು ಗ್ರಾಮದ ಮಮತಾ ಎಂಬ ವಿದ್ಯಾರ್ಥಿನಿ ಚಿಕಿತ್ಸೆಗಾಗಿ

ಕಡಬ: ಗ್ರಾಮಸಭೆಯಲ್ಲಿ ಹೀಗಾ ಪ್ರಶ್ನೆ ಕೇಳೋದು!? ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸುತ್ತಾ ಕುಸಿದು ಬಿದ್ದ ವೈದ್ಯೆ!! Read More »

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ ಆಗಸ್ಟ್ ೧೦

ಸಮಗ್ರ ನ್ಯೂಸ್: ಪ್ರತೀ ವರ್ಷ ಆಗಸ್ಟ್ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ ಉದ್ದೇಶ ಹೊಂದಿದೆ.

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ ಆಗಸ್ಟ್ ೧೦ Read More »

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಆಕೆಯ ಹೊಟ್ಟೆಯಲ್ಲೇನಿತ್ತು ಗೊತ್ತಾ!? ಇಲ್ಲಿದೆ ಆಶ್ಚರ್ಯಕರ ಸ್ಟೋರಿ…

ಸಮಗ್ರ ನ್ಯೂಸ್: ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಅವರ ಹೊಟ್ಟೆಯಿಂದ 15ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಮಧ್ಯಪ್ರದೇಶದ ಇಂದೋರ್‌ನ ವೈದ್ಯರು ಯಶಸ್ವಿಯಾಗಿದ್ದಾರೆ. ಇಂದೋರ್‌ ಇಂಡೆಕ್ಸ್ ಆಸ್ಪತ್ರೆಗೆ ದಾಖಲಾಗಿದ್ದ 41 ವರ್ಷದ ಮಹಿಳೆಗೆ 12 ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡ ಸತತ 2 ಗಂಟೆಗಳ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಹಿಳೆಯ ತೂಕ 49 ಕೆಜಿ ಇದ್ದು, ಅದರಲ್ಲಿ ಗೆಡ್ಡೆಯ ತೂಕವೇ 15 ಕೆಜಿ ಇತ್ತು. ಗೆಡ್ಡೆ ಮಾರಣಾಂತಿಕವಾಗಿ ಪರಿಣಮಿಸಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಿ, ಯಶಸ್ವಿಯಾಗಿ

ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಆಕೆಯ ಹೊಟ್ಟೆಯಲ್ಲೇನಿತ್ತು ಗೊತ್ತಾ!? ಇಲ್ಲಿದೆ ಆಶ್ಚರ್ಯಕರ ಸ್ಟೋರಿ… Read More »

ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಬೆಳೆಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ| ಆಕೆಯೊಂದಿಗಿರುವ ಫೊಟೋ ವೈರಲ್ ಮಾಡಿದ ಆರೋಪಿ

ಸಮಗ್ರ ನ್ಯೂಸ್:Instagram ಮೂಲಕ ಪರಿಚಯವಾದ ವಿದ್ಯಾರ್ಥಿನಿಯ ಮನೆಯವರಿಗೆ ಕೆಲಸ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಆಕೆಯೊಂದಿಗಿರುವ ಫೊಟೋಗಳನ್ನು ಇತರರಿಗೆ ಹಂಚಿ ಆ ಫೊಟೋಗಳನ್ನು ಅಳಿಸಿ ಹಾಕಬೇಕಿದ್ದರೆ ಹಣದ ಬೇಡಿಕೆಯನ್ನು ಮುಂದಿಟ್ಟ ಆರೋಪಿಯಾದ ಬೀದಿ ನಾಟಕ ಕಲಾವಿದನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಆ. 9ರಂದು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಎಂದು ಗುರುತಿಸಲಾಗಿದ್ದು, ಆರೋಪಿಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಗರದ ಇಂಜಿನಿಯರಿಂಗ್ ಕಾಲೇಜಿನ 19ರ ಹರೆಯದ ವಿದ್ಯಾರ್ಥಿನಿಯನ್ನು ಇನ್ಸ್ಟಾಗ್ರಾಮ್ ಮೂಲಕ

ಸಾಮಾಜಿಕ ಜಾಲತಾಣದಲ್ಲಿ ಗೆಳೆತನ ಬೆಳೆಸಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ| ಆಕೆಯೊಂದಿಗಿರುವ ಫೊಟೋ ವೈರಲ್ ಮಾಡಿದ ಆರೋಪಿ Read More »

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ‌ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ

ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಲು ನರೇಂದ್ರ ಮೋದಿ ಸರ್ಕಾರದ ನೀತಿಗಳೇ ಕಾರಣ: ನಿರ್ಮಲಾ ಸೀತಾರಾಮನ್ Read More »

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು

ಸಮಗ್ರ ನ್ಯೂಸ್:‌ ರಾಜ್ಯದಲ್ಲಿ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕೆಲ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅದೂ ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಈ ಕಾರಣ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ಶಾಸಕರು ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರ ಹಕ್ಕುಗಳಿಗೆ‌ ಚ್ಯುತಿ ತರುವ ಘಟನೆಗಳು ನಡೆಯುತ್ತಿವೆ. ವಿರೋಧ ಪಕ್ಷದ ಶಾಸಕರನ್ನು ಅಧಿಕಾರಿಗಳ ಮೂಲಕ ದಮನಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮುಂದಿನ ಮೂರು ದಿನಗಳ

ಮಂಗಳೂರು: ಮರ್ಯಾದೆ ನೀಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ನೀಡಿದ ಶಾಸಕರು Read More »

ಇನ್ನು ಮುಂದೆ UPI ಪಿನ್‌ ಹಾಕದೇ 500 ರೂ. ಸೆಂಡ್‌ ಮಾಡಿ.!

ನವದೆಹಲಿ: ಮುಂದಿನ ದಿನಗಳಲ್ಲಿ ಯುಪಿಐ ಲೈಟ್ (UPI Lite) ವಹಿವಾಟು ಮಿತಿಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 200 ರೂ.ನಿಂದ 500 ರೂ.ಗೆ ಏರಿಸಿದ್ದು ಗ್ರಾಹಕರು ಯುಪಿಐ ಲೈಟ್‌ ಅಪ್ಲಿಕೇಶನ್‌ನಲ್ಲಿ ಪಿನ್‌ ಹಾಕದೇ 500 ರೂ. ಕಳುಹಿಸಬಹುದಾಗಿದೆ. ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಸುದ್ದಿಗೋಷ್ಠಿ ನಡೆಸಿ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (NCMC) ಮತ್ತು ಯುಪಿಐ ಲೈಟ್ ಸೇರಿದಂತೆ ಆಫ್‌ಲೈನ್ ಮೋಡ್‌ನಲ್ಲಿ ಸಣ್ಣ ಮೌಲ್ಯದ ಡಿಜಿಟಲ್ ಪಾವತಿಗಳಿಗಾಗಿ ಪ್ರತಿ ವಹಿವಾಟಿಗೆ 200 ರೂ. ಮತ್ತು ದಿನದ ವಹಿವಾಟಿಗೆ

ಇನ್ನು ಮುಂದೆ UPI ಪಿನ್‌ ಹಾಕದೇ 500 ರೂ. ಸೆಂಡ್‌ ಮಾಡಿ.! Read More »