August 2023

ಪುತ್ತೂರು: 1 ಲಕ್ಷ ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್: ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ₹1ಲಕ್ಷ ಮೌಲ್ಯದ ಅಡಿಕೆ ಮತ್ತು ₹10ಸಾವಿರ ನಗದು ಹಣ ಕಳವಾದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಸಮೀಪದ ನೆಕ್ಕರೆ ಡಿವೈನ್ ಮರ್ಸಿ ಮನೆಯ ಕಾರ್ಮಿನ್‌ ಮಿರಾಂದ ಅವರ ಮನೆಯಿಂದ ಅಡಿಕೆ ಕಳವಾಗಿದೆ.ಈ ಬಗ್ಗೆ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ‘ಪತಿ ಸುನಿಲ್ ಮಿರಾಂದ ಅವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿ ಅವರು ಅವರ ಮನೆಯಲ್ಲಿ ಅಡಿಕೆ ಒಣಗಿಸಲು ಜಾಗ […]

ಪುತ್ತೂರು: 1 ಲಕ್ಷ ಮೌಲ್ಯದ ಅಡಿಕೆ ಕಳವು Read More »

ಧರ್ಮಸ್ಥಳದ ಅಣ್ಣಪ್ಪ ಸನ್ನಿಧಿ ಎದುರು ನಡೆದದ್ದು ಪ್ರಮಾಣವೇ?| ನಿಜಕ್ಕೂ ಅಲ್ಲಿ ನಡೆದದ್ದೇನು?

ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ‌ ಬಳಿ ನಡೆದ ಸೌಜನ್ಯ ಅತ್ಯಾ‌ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ತಾಯಿ ಕುಸುಮಾವತಿ ಹೆಸರಿಸಿದ್ದ ಧೀರಜ್ ಕೆಲ್ಲ, ಉದಯ್ ಜೈನ್, ಮಲಿಕ್ ಜೈನ್ ಅಣ್ಣಪ್ಪ ಬೆಟ್ಟದಲ್ಲಿ ಪ್ರಾರ್ಥನೆ ಮಾಡಿದ್ದು ಇದರ ಬಗ್ಗೆ ಇದೀಗ ಜಿಜ್ಞಾಸೆ ಮೂಡಿದೆ. ಇಂದು(ಆ.26) ವಿಹಿಂಪ ಹಾಗೂ ಭಜರಂಗದಳದ ನೇತೃತ್ವದಲ್ಲಿ ನೇತ್ರಾವತಿಯಿಂದ ಅಣ್ಣಪ್ಪ‌ ಬೆಟ್ಟಕ್ಕೆ ಪಾದಯಾತ್ರೆ ನಡೆದಿತ್ತು. ಈ ಪಾದಯಾತ್ರೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಭಾಗವಹಿಸಿದ್ದರು. ಪಾದಯಾತ್ರೆಯಲ್ಲಿ ಅಣ್ಣಪ್ಪ ಬೆಟ್ಟಕ್ಕೆ ತೆರಳಿದ ಪ್ರತಿಭಟನಾಕಾರರ ಎದುರು ಧೀರಜ್

ಧರ್ಮಸ್ಥಳದ ಅಣ್ಣಪ್ಪ ಸನ್ನಿಧಿ ಎದುರು ನಡೆದದ್ದು ಪ್ರಮಾಣವೇ?| ನಿಜಕ್ಕೂ ಅಲ್ಲಿ ನಡೆದದ್ದೇನು? Read More »

ಹೆತ್ತ ತಂದೆಯಿಂದಲೇ ಮಗಳ ಕೊಲೆ| ಪರಜಾತಿಯವನ ಪ್ರೀತಿಸಿದ ತಪ್ಪಿಗೆ ಮರ್ಯಾದಾ ಹತ್ಯೆ

ಸಮಗ್ರ ನ್ಯೂಸ್: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಯುವತಿಯನ್ನು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ತೊಟ್ಲಿ ಗ್ರಾಮದಲ್ಲಿ ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ರಮ್ಯಾ (19) ಎಂಬ ಯುವತಿಯನ್ನು ತಂದೆಯೇ ಹತ್ಯೆ ಮಾಡಿ ಆಗಸ್ಟ್ 25 ರಂದು ಅಂತ್ಯಸಂಸ್ಕಾರ ಮಾಡಿದ್ದರು. ಬಳಿಕ ಗ್ರಾಮದಲ್ಲಿ ಕೊಲೆ ಮಾಡಿರುವ ಬಗ್ಗೆ ಗುಸು ಗುಸು ಶುರುವಾಗಿದೆ. ಹೀಗಾಗಿ ಯುವತಿ ತಂದೆ ವೆಂಕಟೇಶ್ ಗೌಡ ವಿಚಾರಣೆ ಮಾಡಿದಾಗ ಪ್ರಕರಣ ಬಯಲಿಗೆ ಬಂದಿದೆ. ಪ್ರಕರಣ ಸಂಬಂಧ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು

ಹೆತ್ತ ತಂದೆಯಿಂದಲೇ ಮಗಳ ಕೊಲೆ| ಪರಜಾತಿಯವನ ಪ್ರೀತಿಸಿದ ತಪ್ಪಿಗೆ ಮರ್ಯಾದಾ ಹತ್ಯೆ Read More »

ಮೊಬೈಲ್ ಬಳಸಿಕೊಂಡು ವಾಹನ ಚಲಾಯಿಸ್ತೀರಾ| ಈ ಸ್ಟೋರಿ ನೋಡ್ಲೇಬೇಕು

ಸಮಗ್ರ ನ್ಯೂಸ್: ವಾಹನ ಚಾಲನೆಯ ವೇಳೆಯಲ್ಲಿ ಮೊಬೈಲ್ ಬಳಕೆ ಕಾನೂನು ರೀತಿ ನಿಷಿದ್ಧ. ಹೀಗೆ ಬಳಕೆ ಮಾಡೋದು ಅಪರಾಧ. ಒಂದು ವೇಳೆ ವಾಹನ ಚಾಲನೆ ವೇಳೆ ಮೊಬೈಲ್ ನಲ್ಲಿ ಮಾತನಾಡುತ್ತ ಸಿಕ್ಕಿಬಿದ್ದರೇ ಫೈನ್ ಫಿಕ್ಸ್. ಆದ್ರೇ ಹೀಗೆ ಮಾಡೋದು ಸರಿಯಲ್ಲ. ತಪ್ಪು ಕೂಡ. ಬೈಕ್ ಸವಾರಿ ಮಾಡುವಾಗ, ಕಾರು ಚಾಲನೆ ಮಾಡುವಾಗ ಅಥವಾ ರಸ್ತೆಯಲ್ಲಿ ನಡೆಯುವಾಗ ಮೊಬೈಲ್ ಫೋನ್ ಬಳಸುವುದು ಮಾರಣಾಂತಿಕವೆಂದು ಸಾಬೀತುಪಡಿಸುತ್ತದೆ. ಬೈಕ್ ಸವಾರಿ ಮಾಡುವಾಗ ಫೋನ್ ಬಳಸುವುದರಿಂದ ಉಂಟಾಗುವ ವಿನಾಶಕಾರಿ ಪರಿಣಾಮಗಳನ್ನು ತೋರಿಸುವ ವೀಡಿಯೊ

ಮೊಬೈಲ್ ಬಳಸಿಕೊಂಡು ವಾಹನ ಚಲಾಯಿಸ್ತೀರಾ| ಈ ಸ್ಟೋರಿ ನೋಡ್ಲೇಬೇಕು Read More »

ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ವೀಡಿಯೋ ಹರಿಯಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಯುವಕನನ್ನು ಕಟ್ಟತ್ತಾರು ನಿವಾಸಿ ನಾ‌ಸಿರ್ ಎಂದು ಗುರುತಿಸಲಾಗಿದೆ. ತಾನು ಡ್ರೈವರ್ ಕೆಲಸ ಮಾಡುತ್ತಿದ್ದ ಮನೆಯ ಮಾಲೀಕರು ತನ್ನನ್ನು ಕರೆಸಿ ಹಲ್ಲೆ ನಡೆಸಿದ್ದಾರೆ ಎಂದು ವೀಡಿಯೋ ಮೂಲಕ ಹೇಳಿದ್ದು ತದನಂತರ ಆತ್ಮಹತ್ಯೆಗೆ ಯತ್ನಿಸಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ

ಪುತ್ತೂರು: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು Read More »

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಧರ್ಮಸ್ಥಳದ ಬಳಿಯ ಮಣ್ಣಸಂಕ ಎಂಬಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಯಾದ ವಿದ್ಯಾರ್ಥಿನಿ ಸೌಜನ್ಯ ಮರು ತನಿಖೆಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಅದೀಗ ರಾಜ್ಯದ ಎಲ್ಲೆಯನ್ನು ದಾಟಿ ಮುನ್ನುಗುತ್ತಿದೆ. ಕಳೆದ 3- 4 ದಿನಗಳಿಂದ ಈ ಹೋರಾಟ ವೇಗವನ್ನು ಹೆಚ್ಚಿಸಿಕೊಂಡಿದ್ದು ಮುಂದಿನ ಒಂದು ವಾರಗಳ ಕಾಲ ಬೆಳ್ತಂಗಡಿಯನ್ನು ಕೇಂದ್ರಿಕರಿಸಿ ಹಲವು ಹೋರಾಟಗಳು ನಡೆಯುತ್ತಿವೆ. ಆ 27 ರಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಧರ್ಮಸ್ಥಳಕ್ಕೆ ಪಾದಯಾತ್ರೆಯೊಂದನ್ನು ಆಯೋಜಿಸಿದೆ. ಇದರಲ್ಲಿ ಸೌಜನ್ಯ ತಾಯಿ

ಧರ್ಮಸ್ಥಳ: ಕುಸುಮಾವತಿಯವರಿಗಾಗಿ ನಾವು ಅಣ್ಣಪ್ಪ ಬೆಟ್ಟದಲ್ಲಿ ಕಾಯುತ್ತಿರುತ್ತೇವೆ| ಉದಯ್ ಜೈನ್, ಮಲ್ಲಿಕ್ ಜೈನ್, ಧೀರಜ್ ಕೆಲ್ಲ ವಾಟ್ಸಪ್ ಸಂದೇಶ ವೈರಲ್ Read More »

ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ

ಸಮಗ್ರ ನ್ಯೂಸ್: ಸಣ್ಣ ಕಾರು ಹೊಂದಿರುವವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್‌ ಕಾರ್ಡ್‌ ಹೊಂದಿರುವವರಲ್ಲೂ ಕೆಲವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ಇದು ನಮ್ಮ ಗಮನಕ್ಕೂ ಬಂದಿದೆ. ಕಾರು ಇಟ್ಟುಕೊಂಡವರ ಕುಟುಂಬದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸಬೇಕೇ, ಬೇಡವೇ ಎಂಬ ಕುರಿತು ಚರ್ಚೆ ನಡೆಯುತ್ತಿದೆಯಷ್ಟೆ. ಸದ್ಯಕ್ಕೆ ಕಾರು ಇಲ್ಲದವರ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲ್ಲ. ಕಾರು ಇದ್ದೂ

ಸಣ್ಣ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ Read More »

ಉತ್ತರ ಕನ್ನಡ:ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಸಮಗ್ರ ನ್ಯೂಸ್: ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹರಿದೇವ ನಗರದಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಸ್ಥುಥಿ(3), ಗಣಪತಿ ಮೂರ್ತಿ ಎಂದು ಮಣ್ಣನ್ನು ಬಾವಿಯಲ್ಲಿ ಹಾಕಲು ಹೋಗಿದ್ದಾಳೆ. ಈ ವೇಳೆ ಕಾಲು ಜಾರಬಾವಿಗೆವಿ ಬಿದ್ದು ಮೃತಪಟ್ಟಿದ್ದಾಳೆ. ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದೆ ಇದ್ದಾಗ ಗಾಬರಿಗೊಂಡ ಪೋಷಕರು ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ, ಎಲ್ಲಿ ಹುಡುಕಿದರೂ ಕಾಣಿಸದೇ ಇದ್ದಾಗ ಬಡಾವಣೆಯ ನಿವಾಸಿಗಳೆಲ್ಲ ಹುಡುಕುತ್ತಾ ಬಾವಿಯೊಳಗೆ

ಉತ್ತರ ಕನ್ನಡ:ಕಾಲು ಜಾರಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು Read More »

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ

ಸಮಗ್ರ ನ್ಯೂಸ್: ರಾಜ್ಯದ ಇಬ್ಬರು ಕೇಂದ್ರ ಸರ್ಕಾರದ 2023ನೇ ಸಾಲಿನ ಅತ್ಯುತ್ತಮ ಶಿಕ್ಷಕ, ಶಿಕ್ಷಕಿ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೇಶಾದ್ಯಂತ 50 ಮಂದಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ಕನ್ನಡ ಶಿಕ್ಷಕ ನಾರಾಯಣ ಪರಮೇಶ್ವರ್ ಭಾಗವತ್ ಮತ್ತು ಬಾಗಲಕೋಟೆಯ ಕೆಎಲ್ ಇ ಸೊಸೈಟಿಯ ಎಸ್ ಸಿಪಿ ಜೂನಿಯರ್ ಕಾಲೇಜಿನ ಸಪ್ನಾ ಶ್ರೀಶೈಲ ಅನಿಗೋಳ ಅವರಿಗೆ ಪ್ರಶಸ್ತಿ ಲಭಿಸಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಶಿಕ್ಷಕರ ದಿನಾಚರಣೆಯಂದು ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ Read More »

ಮಂಗಳೂರು: ಅಪಘಾತಕ್ಕೆ ಬಾಲಕ ಬಲಿ

ಸಮಗ್ರ ನ್ಯೂಸ್: ವಾಹನ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ವ್ಯಾಪ್ತಿಯ ಅಡ್ಯಾರ್ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಅಡ್ಯಾರ್ ಪದವು ನಿವಾಸಿ ಶರಪುದ್ದಿನ್ (16) ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ಅಡ್ಯಾರ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಹಿಂಬದಿಯಲ್ಲಿದ್ದ ಶರಪುದ್ದಿನ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಚಾಲಕನಿಗೂ ಕೂಡ ಅಪಘಾತದಲ್ಲಿ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮಂಗಳೂರು: ಅಪಘಾತಕ್ಕೆ ಬಾಲಕ ಬಲಿ Read More »