ಸಮಗ್ರ ನ್ಯೂಸ್: ಧರ್ಮಸ್ಥಳದ ಮಣ್ಣಸಂಕ ಬಳಿ ಕೊಲೆ ಮತ್ತು ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿದ್ದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಸೌಜನ್ಯ ಪರ ಹೋರಾಟ ಸಮಿತಿಯನ್ನು ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ರಚನೆ ಮಾಡಲಾಯಿತು.
ಹೋರಾಟದ ನೇತೃತ್ವ ವಹಿಸಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರೊಂದಿಗೆ ಮಾತನಾಡಿ ಯುವಕರೆಲ್ಲಾ ಸೇರಿ ಹೋರಾಟಕ್ಕೆಂದೇ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಮಾಡಲಾಯಿತು. ಯಾವುದೇ ಜಾತಿ ಹಾಗೂ ಪಕ್ಷ ಭೇದವಿಲ್ಲದೆ ಎಲ್ಲೇ ಪ್ರತಿಭಟನೆ ನಡೆದರು ತಿಮರೋಡಿ ಜೊತೆಯಾಗಿ ನಿಲ್ಲುತ್ತೇವೆಂದು ಆಶ್ವಾಸನೆ ನೀಡಿದರು.
ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲೂ ಭಾಗವಹಿಸಿದ್ದ ಯುವಕರ ತಂಡ ಇನ್ನು ಸೆ. 3ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಐವರ್ನಾಡಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲು ನಿರ್ಧರಿಸಿದ್ದಾರೆ.
ತಂಡದಿಂದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆಯಾಗಲಿ ಎಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು.