Ad Widget .

ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ ಒಬಾಮಾ ದಂಪತಿ| ಸರ್ವಧರ್ಮ ಕೇಂದ್ರದ ಶಂಕುಸ್ಥಾಪನೆಗೆ ಅಮೇರಿಕಾ ಮಾಜಿ ಅಧ್ಯಕ್ಷ ಆಗಮನ

ಸಮಗ್ರ ನ್ಯೂಸ್: ರಾಜ್ಯದ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಜಾಗತಿಕ ದೊಡ್ಡಣ್ಣನೆಂದು ಕರೆಸಿಕೊಂಡಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಆಗಮಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ವಧರ್ಮ ಸಮನ್ವಯ ಕೇಂದ್ರವನ್ನು (ಮದರ್ ಅರ್ಥ್ ಆಧ್ಯಾತ್ಮಿಕ ಕೇಂದ್ರ) ಮಂಡ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು, ಇದಕ್ಕೆ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ದಂಪತಿ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಜಗತ್ತಿನಲ್ಲಿ ಮೊಟ್ಟ ಮೊದಲನೆಯದಾಗಿ ನಿರ್ಮಾಣ ಮಾಡಲಾಗುತ್ತಿರುವ ಸರ್ವಧರ್ಮ ಸಮನ್ವಯ ಕೇಂದ್ರವೆಂದೂ (ಮದರ್ ಅರ್ಥ್) ಕರೆಯಬಹುದು. ಇದು ಒಂದು ಧರ್ಮಕ್ಕೆ ಸೀಮತವಾಗದೇ ಎಲ್ಲಾ ಧರ್ಮವೂ ಸಮಾನ ಎಂದು ಸಾರುವ ಸದುದ್ದೇಶದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಅಮೇರಿಕಾದ ಖ್ಯಾತ ಸರ್ಜನ್ ಜನರಲ್ ಡಾ.ವಿವೇಕ್ ಮೂರ್ತಿ ಹಾಗೂ ಅವರ ತಂದೆ ಡಾ.ಮೂರ್ತಿ ಜಂಟಿಯಾಗಿ ಮದರ್ ಅರ್ಥ್ ನಿರ್ಮಾಣ ಮಾಡುತ್ತಿದ್ದಾರೆ.

Ad Widget . Ad Widget . Ad Widget .

ಅಮೇರಿಕಾದ ಖ್ಯಾತ ವೈದ್ಯ ಡಾ.ಮೂರ್ತಿ ಅವರು ಹಲ್ಲೇಗೆರೆ ಗ್ರಾಮದವರೇ ಆಗಿದ್ದಾರೆ. ಸದ್ಯ ಅಮೇರಿಕದಲ್ಲಿ ಡಾ.ಮೂರ್ತಿ ಹಾಗೂ ಕುಟುಂಬ ವಾಸವಾಗಿದೆ. ಹುಟ್ಟೂರು ಮರೆಯದೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮೂರ್ತಿ, ಈಗ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣಕ್ಕೆ ಮುಂದಾಗುವ ಮೂಲಕ ಸರ್ವ ಧರ್ಮ ಸಮನ್ವಯ ಸಂದೇಶ ಸಾರಲು ಹೊರಟಿದ್ದಾರೆ. ಮಂಟಪದಲ್ಲಿ ಭೂ ದೇವಿ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಚಿಂತನೆ ಮಾಡಲಾಗಿಎ. ಭೂಮಿ ಪ್ರತಿಮೆ ಜೊತೆಗೆ ಪ್ರಪಂಚದ ವಿಶ್ವ ಮಾನವರ ಪ್ರತಿಮೆ ನಿರ್ಮಾಣ ಮಾಡಲಾಗುತ್ತದೆ. ಈ ಪೈಕಿ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ 64 ಮಂದಿ ವಿಶ್ವಮಾನವರ ಪ್ರತಿಮೆಗೆ ಪ್ಲಾನ್ ಮಾಡಲಾಗಿದೆ.

Leave a Comment

Your email address will not be published. Required fields are marked *