ಚಿಕ್ಕಮಗಳೂರು : ಕಾಫಿ ಬೆಳೆ ನಾಶದಿಂದ ರೈತ ಆತ್ಮಹತ್ಯೆ| ಎರಡೇ ದಿನಕ್ಕೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಕಿನ ರೈತನೊಬ್ಬ ಬೆಳೆ ನಾಶದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.1 ರಂದು ನಡೆದಿದೆ. ಎರಡೇ ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ.

Ad Widget ... ..

ಮಳೆ ಇಲ್ಲದೆ ಬೆಳೆ ನಾಶವಾದ ಹಿನ್ನೆಲೆ ಮನನೊಂದು ರೈತ ಪರಮೇಶ್ವರಪ್ಪ (52) ಆತ್ಮಹತ್ಯೆಗೆ ಶರಣಾಗಿದ್ದಾನೆ.
ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ.

Ad Widget

3 ಎಕರೆ ಜಮೀನನಲ್ಲಿ ಹಾಕಿದ್ದ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿದ್ದು. ಬ್ಯಾಂಕ್ ನಲ್ಲಿ ಬಡ್ಡಿ ಹಾಗೂ ಕೈಸಾಲ ಸೇರಿ 5 ಲಕ್ಷ ಸಾಲ ಮಾಡಿದ್ದ ರೈತ ಎಂದು ತಿಳಿದಿದೆ. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಗಿರಿಯಾಪುರದ ರೈತ ಸತೀಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದು, ಪರಮೇಶ್ವರಪ್ಪ ಆತ್ಮಹತ್ಯೆ ಬಗ್ಗೆ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *