Ad Widget .

ಪಡಿತರ ಚೀಟಿ ತಿದ್ದುಪಡಿಗೆ ಇಂದಿನಿಂದ ಕಾಲಾವಕಾಶ

ಸಮಗ್ರ ನ್ಯೂಸ್: ರೇಷನ್ ಕಾರ್ಡ್ ತಿದ್ದುಪಡಿಗೆ ಇಂದಿನಿಂದ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿನ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ವಿವರಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ.

Ad Widget . Ad Widget .

ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರಕಲಿದೆ. ಇನ್ನೊಂದೆಡೆ ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾ ಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ ಅಲೆದಾಡುತ್ತಿದ್ದಾರೆ.

Ad Widget . Ad Widget .

ಹೀಗಾಗಿ ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶ ಒದಗಿ ಬಂದಿದೆ.ರೇಷನ್ ಕಾರ್ಡ್​ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್​ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ. ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಓನ್ ಹಾಗೂ ಕರ್ನಾಟಕ ಓನ್ ಸೇರಿ ಇತರ ಕಡೆಗಳಲ್ಲಿ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.

Leave a Comment

Your email address will not be published. Required fields are marked *