Ad Widget .

ಲೋಕಸಭಾ ಚುನಾವಣೆ ಹಿನ್ನಲೆ| ಬಿಜೆಪಿಯಿಂದ ದೇಶಾದ್ಯಂತ ಕಾಲ್ ಸೆಂಟರ್‌ ಸ್ಥಾಪನೆಗೆ ಸಿದ್ಧತೆ

ಸಮಗ್ರ ನ್ಯೂಸ್: ಮುಂಬರುವ ಪಂಚರಾಜ್ಯ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಹೆಚ್ಚು ಮತದಾರರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ದೇಶಾದ್ಯಂತ 200ಕ್ಕೂ ಹೆಚ್ಚು ಕಾಲ್ ​​ಸೆಂಟರ್​ಗಳನ್ನು ತೆರೆಯಲು ಸಿದ್ದತೆ ನಡೆಸಿದೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಮುಂದಾಗಿದೆ.

Ad Widget . Ad Widget .

ಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್​ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್​ ಹಾಗೂ ಸುನೀಲ್​ ಬನ್ಸಾಲ್​ ಇದರ ಹೊಣೆಗಾರಿಕೆಯನ್ನು ಹೊತ್ತಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

Ad Widget . Ad Widget .

ಕಾಲ್ ​ಸೆಂಟರ್​ಗಳನ್ನು ಪ್ರಾರಂಭಿಸುವ ಕುರಿತು ಪಕ್ಷದ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಮುಂಬರುವ ಪಂಚರಾಜ್ಯ ಹಾಗೂ ಲೋಕಸಭೆ ಚುನಾವಣೆ ಮೇಲೆ ಬಿಜೆಪಿ ನಾಯಕರು ಹೆಚ್ಚು ಕೇಂದ್ರಿಕರಿಸಿದ್ದಾರೆ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಕಾಲ್ ​ಸೆಂಟರ್​ ತೆರೆಯಲು ಉದ್ದೇಶಿಸಲಾಗಿದ್ದು, ಏಕಕಾಲದಲ್ಲಿ 200ಕ್ಕೂ ಹೆಚ್ಚು ಕಡೆ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.

Leave a Comment

Your email address will not be published. Required fields are marked *