Ad Widget .

ಕೊಟ್ಟಿಗೆಹಾರ: ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷರಾಗಿ ಪದ್ಮರಾಜ್ ಆಯ್ಕೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷರಾಗಿ ಸುಂಕಸಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪದ್ಮರಾಜ್ ಅವರು ಸೆ. 2ರಂದು ಅವಿರೋಧವಾಗಿ ಆಯ್ಕೆಯಾದರು.

Ad Widget . Ad Widget .

ಈ ಹಿಂದಿನ ಅಧ್ಯಕ್ಷರಾಗಿದ್ದ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೆ. 2ರಂದು ರಾತ್ರಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ದೇವೆಂದ್ರ ಪದ್ಮರಾಜ್ ಅವರ ಅವಿರೋಧ ಆಯ್ಕೆಯನ್ನು ಘೋಷಿಸಿದರು.

Ad Widget . Ad Widget .

ಪದ್ಮರಾಜ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಹಾಗೂ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ನೌಕರರ ಭವನದಲ್ಲಿ ನಡೆದ ಆಯ್ಕೆಯ ವೇಳೆ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು, ತಾಲೂಕು ಸಮಿತಿ ಪದಾಧಿಕಾರಿಗಳಿದ್ದರು.

Leave a Comment

Your email address will not be published. Required fields are marked *