ಮಂಗಳೂರು: ಬಜ್ಪೆಯಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಕೇಸು ದಾಖಲು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ಅನ್ಯಕೋಮಿನ ಯುವಕರ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ನಡೆದಿದೆ. ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ.

Ad Widget ... ..

ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್‌ನೊಂದಿಗೆ ಕರಂಬಾರಿನಿಂದ ಬಜ್ಜೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿವೆ. ಅವರನ್ನು ತಕ್ಷಣ ಬಜ್ಜೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget

ಘಟನೆಯ ಕುರಿತು ಮಾಹಿತಿ ಪಡೆದ ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *