Ad Widget .

ಸುಳ್ಯ: ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟನೆ

ಸಮಗ್ರ ನ್ಯೂಸ್: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಜನ್ಮದಿನೋತ್ಸವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಗ್ಗೆ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಿತು.

Ad Widget . Ad Widget .

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಅತಿಥಿಗಳು ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಪದನಿಮಿತ್ತ ಸಹನಿರ್ದೇಶಕ ಡಾ.ಸಿಪ್ರಿಯನ್ ಮೊಂತೆರೋ, ಸುಳ್ಯ ತಹಶೀಲ್ದಾರ್ ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಡಜಣ್ಣ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ವಿಶ್ವನಾಥ ಬದಿಕಾನ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಡಿಡಿಪಿಐ ದಯಾನಂದ ಸ್ವಾಗತಿಸಿದರು. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ. ಗಣ್ಯರ ಶುಭಾಶಯ ಓದಿದರು. ಉದ್ಘಾಟನಾ ಕಾರ್ಯಕ್ರಮ ಮೊದಲು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Ad Widget . Ad Widget .

Leave a Comment

Your email address will not be published. Required fields are marked *