ಸಮಗ್ರ ನ್ಯೂಸ್: 1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು ರಸ್ತೆಗಿಳಿಸಲು ಬಿಬಿಎಂಪಿ ಸಜ್ಜಾಗಿದೆ.
ಈಗಾಗಲೇ ಒಂದು ಹಂತದ ಟೆಂಡರ್ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಒಂದು ವರ್ಷದೊಳಗೆ 10 ಡಬಲ್ ಡೆಕ್ಕರ್ ಬಸ್ಸುಗಳು ಬೆಂಗಳೂರಿನಲ್ಲಿ ಸಂಚರಿಸಲಿವೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೂಡ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರ ಕುರಿತು ಆಸಕ್ತಿ ಹೊಂದಿದ್ದು, ಬಿಬಿಎಂಪಿಗೆ ಈ ಬಸ್ಸುಗಳು ಬಂದ ಬಳಿಕ ಅವುಗಳ ಸಾಧಕ ಬಾಧಕಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಮೈಸೂರಿನಂತಹ ನಗರಗಳಲ್ಲಿ ಡಬಲ್ ಡೆಕ್ಕರ್ ಬಸ್ಸುಗಳನ್ನು ರಸ್ತೆಗಿಳಿಸಲು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.