ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ವಿವಿಧ ಪ್ರದೇಶಗಳಲ್ಲಿ ಮುಂದಿನ 10 ದಿನಗಳ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಸೆಪ್ಟೆಂಬರ್ 14ರ ವರೆಗೆ ಕರಾವಳಿ, ಮಲೆನಾಡು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಕ್ಷಿಣ ಭಾಗಗಳಲ್ಲಿ ಗಣನೀಯ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಪ್ರದೇಶದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರ ಕರ್ನಾಟಕದ ಅಲ್ಲಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.