Ad Widget .

ನಾವು ಹಿಂದೂಗಳಲ್ವೇ? ಇದ್ಯಾವುದು ಹೊಸ ಸನಾತನ ಧರ್ಮ?, ಹಿಂದೂ ಎಂದು ಅರಚುತ್ತಿದ್ದವರು ಎಲ್ಲೋದ್ರು? – ನಟ ಕಿಶೋರ್

ಸಮಗ್ರ ನ್ಯೂಸ್: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ.

Ad Widget . Ad Widget .

ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ?
ಇದಾವುದು ಹೊಸ ಧರ್ಮ ? ಸನಾತನ??” ಎಂದು ಪ್ರಶ್ನೆ ಮಾಡಿದ್ದಾರೆ.

Ad Widget . Ad Widget .

”ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..” ಎಂದಿದ್ದಾರೆ.

”ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *