Ad Widget .

ಕಡಬ: ನಾಲ್ಕು ಗ್ರಾ.ಪಂ. ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್, ಮಾನಿಟರ್ ಹಸ್ತಾಂತರ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಗ್ರಾಮ ಪಂಚಾಯತ್ ನ ನಾಲ್ಕು ಗ್ರಂಥಾಲಯಗಳಿಗೆ ಲ್ಯಾಪ್ ಟಾಪ್ ಹಾಗೂ ಮಾನಿಟರ್ ಗಳನ್ನು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಯಿತು.

Ad Widget . Ad Widget .

ಶಿಕ್ಷಣ ಫೌಂಡೇಶನ್, ಡೆಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಗ್ರಾಮ ಡಿ ಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಸಾಧನಗಳನ್ನು ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಹಾಗೂ ಚೆನ್ನಪ್ಪ ಗೌಡ ಅವರ ಸಮ್ಮುಕದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಸ್ತಾಂತರಿಸಲಾಯಿತು. ಕಾರ್ಯ ನಿರ್ವಹಣಾಧಿಕಾರಿ ಅವರು ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾತನಾಡಿದರು.

Ad Widget . Ad Widget .

ಶಿಕ್ಷಣ ಫೌಂಡೇಶನ್ ನ ಗ್ರಾಮ ಡಿಜಿ ವಿಕಸನದ ಜಿಲ್ಲಾ ಸಂಯೋಜಕ ಲವಿಶ್ ಕುಮಾರ್ ಪಿ. ಹಾಗೂ ತಾಲೂಕು ಸಂಯೋಜಕಿ ರಾಧಿಕಾ ಅವರು ಗ್ರಾಮ ಡಿಜಿ ವಿಕಸನದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು, ತಾ.ಪಂ. ಸಿಬ್ಬಂಧಿಗಳು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *