Ad Widget .

ಲೋಕಸಭಾ ಚುನಾವಣೆ| ತೆನೆ ಬಿಟ್ಟು ಕಮಲ ಹೊರಲಿರುವ ಮಹಿಳೆ| ಮೈತ್ರಿಸೂತ್ರ ಒಪ್ಪಿಕೊಳ್ಳಲು ಯಡಿಯೂರಪ್ಪ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೈತ್ರಿ ಯಶಸ್ವಿಯೂ ಆಗಿದ್ದು, ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಿಜೆಪಿಯಿಂದ ಅಥವಾ ಜೆಡಿಎಸ್ ಕಡೆಯಿಂದ ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆ.ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪನವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಒಪ್ಪಿಗೆ ನೀಡಿದ್ದಾರೆ. ರಾಜ್ಯದ ಒಟ್ಟು 28 ಲೋಕಸಭಾ ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಅಮಿತ್ ಶಾ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Ad Widget . Ad Widget . Ad Widget .

ಈಗ ಮಾಜಿ ಸಿಎಂ ಯಡಿಯೂರಪ್ಪ ಅವರು ನೀಡಿರುವ ಮಾಹಿತಿಯಂತೆ ಜೆಡಿಎಸ್ ಗೆ ನಾಲ್ಕು ಕ್ಷೇತ್ರಗಳು ಸಿಗುವುದು ಪಕ್ಕಾ ಆಗಿದೆ. ಆದರೆ, ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಲಾಗುತ್ತದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬಹುಶಃ ದೊಡ್ಡಗೌಡರು, ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲೇ ಲಗ್ಗೆಯಿಡಲು ಕೇಳಿರಬಹುದೇ ಎಂಬ ಮಾತುಗಳು ಕೇಳಿಬಂದಿವೆ.

ಮೊದಲನೆಯಾದಾಗಿ ಹಾಸನ, ಆನಂತರ. ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ದೇವೇಗೌಡರು, ಅಮಿತ್ ಶಾ ಅವರನ್ನು ಕೇಳಿದ್ದರು. ಆದರೀಗ, ಅಮಿತ್ ಶಾ ಅವರು ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಒಪ್ಪಿಗೆ ನೀಡಿರುವುದರಿಂದ ಇವುಗಳಲ್ಲೇ ಯಾವುದಾದರೂ ನಾಲ್ಕು ಸ್ಥಾನಗಳು ಜೆಡಿಎಸ್ ಪಾಲಿಗೆ ಸಿಗುವುದು ಖಾತ್ರಿಯಾಗಿದೆ.

Leave a Comment

Your email address will not be published. Required fields are marked *