ಸಮಗ್ರ ನ್ಯೂಸ್: ಸರಕಾರವು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್, ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು,ಕೂಡಲೇ 2023-24 ನೇ ಸಾಲಿನಲ್ಲಿ ಉಚಿತವಾಗಿ ತರಬೇತಿ ಪಡೆಯಬಹುದಾಗಿದೆ. ಈ ಸದಾವಕಾಶವನ್ನು ಸದುಪಯೋಗಪಡಿಸಲು ಇಲ್ಲಿದೆ ಪೂರ್ಣ ಮಾಹಿತಿ
ಇದು ೧೦ ತಿಂಗಳ ತರಬೇತಿ ಆಗಿದ್ದು, ೨೦೨೩-೨೪ನೇ ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್ ಭವನದಲ್ಲಿ ನಡೆಯಲಿರುವ ಐಎಎಸ್, ಕೆಎಎಸ್ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆಗೆ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸುವವರು ಕನಿಷ್ಠ ಪದವಿ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು. ಹಾಗೂ ವಯಸ್ಸು ಕನಿಷ್ಠ 21 ರಿಂದ 35 ಮೀರಿರಬಾರದು. ಅರ್ಜಿಯನ್ನು ಅಭ್ಯರ್ಥಿಗಳು ಸೇವಾ ಸಿಂಧು https://sevasindhuservices.karnataka.gov.in/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದೆ. ಸೆಪ್ಟಂಬರ್ 16 ರ ಮೊದಲು ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8722299990 ಗೆ ಕರೆ ಮಾಡಿ.







