Ad Widget .

ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಾಸ್| ಸಾರಿಗೆ ಸಚಿವರಿಂದ‌ ಬೇಡಿಕೆ ಈಡೇರಿಸುವ ಭರವಸೆ

ಸಮಗ್ರ ನ್ಯೂಸ್: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಖಾಸಗಿ ಸಾರಿಗೆ ಒಕ್ಕೂಟಗಳು ಹಿಂದಕ್ಕೆ ಪಡೆದಿವೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಹೋರಾಟ ನಿರತರ ಮನವಿ ಆಲಿಸಿದ ಬಳಿಕ ಬಂದ್ ಸಂಘಟನೆಗಳು ಕೈ ಬಿಟ್ಟಿವೆ.

Ad Widget . Ad Widget .

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ನಟರಾಜ್ ಶರ್ಮಾ, ನಾವು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಸ್ವತಃ ಸಾರಿಗೆ ಸಚಿವರೇ ಆಗಮಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ. ನಾಳೆಯಿಂದಲೇ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಬಂದ್ ವಾಪಸ್ ಪಡೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *