ಬಂಟ್ವಾಳ: ದುಷ್ಕರ್ಮಿಗಳ ತಂಡದಿಂದ ಯುವಕನ ಮೇಲೆ ಹಲ್ಲೆ…!!

ಸಮಗ್ರ ನ್ಯೂಸ್: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

Ad Widget ... ..

ಹಲ್ಲೆಗೊಳಗಾದವರನ್ನು ಮೈಂದಾಳ ನಿವಾಸಿ ನಿಸಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ನಿಸಾರ್ ರಸ್ತೆ ಬದಿ ನಡೆದುಕೊಂಡು ಮೈಂದಾಳ ಸೇತುವೆ ಬಳಿಯ ಗುರಿಮಜಲು ಎಂಬಲ್ಲಿ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ನಿಸಾರ್ ಅವರನ್ನು ಅಡ್ಡ ಗಟ್ಟಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

Ad Widget

ಈ ಸಂದರ್ಭ ನಿಸಾರ್ ದುಷ್ಕರ್ಮಿಗಳ ಕೈಯಿಂದ ತಪ್ಪಿಸಿ ಓಡಿ ಹೋಗಿದ್ದು, ಸ್ನೇಹಿತನಿಗೆ ಕರೆ ಮಾಡಿ ತಿಳಿಸಿ ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *