ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಕೊಲೆಯಲ್ಲಿ ಅಂತ್ಯವಾದ ಪತ್ನಿ

ಸಮಗ್ರ ನ್ಯೂಸ್:ಪತಿ ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ
ಮಡಿಕೇರಿಯ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.

. Ad Widget . Ad Widget

ಪಶ್ಚಿಮ ಬಂಗಾಳದ ರಾಧಿಕಾ(40) ಮೃತ ಮಹಿಳೆ ಇದೇ ರಾಜ್ಯದ ರೋಷನ್(30) ಪತಿ ಬಂಧಿತ ಆರೋಪಿ. ಇವರು ಮಡಿಕೇರಿ ನಗರದ ಖಾಸಗಿ ವಸತಿ ಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗಳು ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ರೋಷನ್ ಪತ್ನಿ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ಮಡಿಕೇರಿ ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.

. Ad Widget . . Ad Widget . Ad Widget

ಆರೋಪಿ ರೋಷನ್ ನನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಮಡಿಕೇರಿ ನಗರ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *