ಸಮಗ್ರ ನ್ಯೂಸ್: ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ಸುಳ್ಯ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಸೆ. 10ರಂದು ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಸುಳ್ಯ ಇಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಸುಳ್ಯ ವಿಧಾನ ಸಭಾ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಳ್ಯ ತಾಲೂಕಿನ ಸ್ವಸಮಾಜದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು. ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು, ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀ ಅಣ್ಣಾ ವಿನಯಚಂದ್ರ, ಉದ್ಯಮಿ ಪೊಸವಳಿಕೆ ಗೋಪಾಲಕೃಷ್ಣ ನಾಯಕ್, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜ ಸುಳ್ಯ ಇದರ ಅಧ್ಯಕ್ಷ ಹೇಮಂತ್ ಕುಮಾರ್ ಕಂದಡ್ಕ, ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ದೇವದಾಸ್ ಪ್ರಭು, ಸುಳ್ಯ ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಇದರ ಅಧ್ಯಕ್ಷೆ ಅನಿತಾ ಕಾಯರ್ತೋಡಿ ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಬಾಂಧವರ ಆಸಕ್ತಿ ಹಾಗೂ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.