ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ, ಸೆಪ್ಟೆಂಬರ್ 16-17ರಂದು ಅತ್ಯಧಿಕ ಮಳೆ ಸುರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೂಡ ಸೆ.16ರಿಂದ ಮಳೆ ಹೆಚ್ಚಾಗಲಿದೆ.
ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


















