Ad Widget .

ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ| ಸೆ. 30 ಕೊನೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023ನ್ನು ನ. 26ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆ ಪ್ರಕಟನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗೆ ಆಹ್ವಾನಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೊದಲ ಪತ್ರಿಕೆ-I: ಸಾಮಾನ್ಯ ಪತ್ರಿಕೆಯು ಬೋಧನೆ ಮತ್ತು ಬುದ್ಧಿ ಸಾಮರ್ಥ್ಯ. ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ. ಈ ಪತ್ರಿಕೆಯು 50 ಬಹುಸಂಖ್ಯಾ ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದೆ. ಪ್ರತಿ ಪ್ರಶ್ನೆಗೆ ಎರಡು ಅಂಕಗಳಿರುತ್ತದೆ. ಹಾಗೂ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಉತ್ತರಿಸಬೇಕು.

Ad Widget . Ad Widget . Ad Widget .

ಎರಡನೇ ಪತ್ರಿಕೆ-II: ವಿಷಯ ಪತ್ರಿಕೆ. ಅಭ್ಯರ್ಥಿಯು ಆಯ್ಕೆ ಮಾಡಿದ ವಿಷಯದ ಸಾಮಾನ್ಯ ಜ್ಞಾನದಲ್ಲಿ ಈ ಪತ್ರಿಕೆ ಇರುತ್ತದೆ. ಈ ಪತ್ರಿಕೆಯು 100 ಕಡ್ಡಾಯ ಬಹುಸಂಖ್ಯಾ ಆಯ್ಕೆ ಪಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪಶ್ನೆಗೂ 2 ಅಂಕಗಳಿರುತ್ತವೆ, ಗರಿಷ್ಠ 200 ಅಂಕಗಳಿರುತ್ತವೆ.

ಅರ್ಹ ಅಭ್ಯರ್ಥಿಗಳು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಕೇವಲ ಗಣಕೀಕೃತ ಅಂಚೆ ಕಚೇರಿಯ ಶಾಖೆಗಳಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸುವಂತೆ ತಿಳಿಸಿದೆ.

ಕೆಸೆಟ್-2023ರ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಸೆ. 11ರಿಂದ ಆರಂಭಗೊಂಡಿದ್ದು, ಸೆ. 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಇ-ಪೋಸ್ಟ್ ಆಫೀಸ್​ನಲ್ಲಿ ಶುಲ್ಕ ಪಾವತಿಸಲು ಅ. 3, ಕೊನೆಯ ದಿನವಾಗಿದೆ.

ಪರೀಕ್ಷಾ ಶುಲ್ಕ:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅವರಿಗೆ 1000 ಸಾವಿರ ರೂ.
ಪ್ರವರ್ಗ-1, ಎಸ್ಸಿ, ಎಸ್ಟಿ, ಪಿಡಬ್ಲೂಡಿ, ಲಿಂಗ ಅಲ್ಪಸಂಖ್ಯಾತರಿಗೆ 700 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ KEA ವೆಬ್ ಸೈಟ್​ಗೆ ಭೇಟಿ ನೀಡಲು ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *