Ad Widget .

ನಾಯಿ ಕಚ್ಚಿದ ಬಾಲಕ ರೇಬಿಸ್‍ನಿಂದ ಸಾವು

ಸಮಗ್ರ ನ್ಯೂಸ್: ನಾಯಿ ಕಚ್ಚಿದ ವಿಚಾರವನ್ನು ಪೋಷಕರಿಂದ ಮುಚ್ಚಿಟ್ಟಿದ 14 ವರ್ಷದ ಬಾಲಕ ರೇಬಿಸ್ ನಿಂದ ಮೃತಪಟ್ಟಿರುವ ಘಟನೆ ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿಯಲ್ಲಿ ನಡೆದಿದೆ.

Ad Widget . Ad Widget .

ಶಹವಾಜ್ ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಆದರೆ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಆದರೆ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Ad Widget . Ad Widget .

ಸೆಪ್ಟೆಂಬರ್ 1 ರಿಂದ ಊಟ ಮಾಡುವುದನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಆತನನ್ನು ವಿಚಾರಿಸಿದಾಗ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ಹೇಳಿದ್ದಾನೆ. ಕೂಡಲೇ ಶಹವಾಜ್ ನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಬಳಿಕ ಆತನಿಗೆ ಆಯುರ್ವೇದ ಔಷಧ ಮಾಡಲಾಗಿದೆ.ಆದರೆ ಕೊನೆಗೆ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ‌.

Leave a Comment

Your email address will not be published. Required fields are marked *