Ad Widget .

ಗಣೇಶ ಚತುರ್ಥಿ ರಜೆ ಸೆ.19ಕ್ಕೆ ನೀಡಿ| ವೇದವ್ಯಾಸ ಕಾಮತ್ ರಿಂದ ಸರ್ಕಾರಕ್ಕೆ ಆಗ್ರಹ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರ ಸೆಪ್ಟೆಂಬರ್ 18ರ ಸೋಮವಾರ ಗಣೇಶ ಚತುರ್ಥಿ ರಜೆಯನ್ನು ಘೋಷಣೆ ಮಾಡಿದೆ. ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌ ಸೆಪ್ಟೆಂಬರ್ 19ರ ಮಂಗಳವಾರ ಗಣೇಶ ಚತುರ್ಥಿ ಹಬ್ಬದ ಸರ್ಕಾರಿ ರಜೆ ನೀಡಲು ಸರ್ಕಾರವನ್ನು ಆಗ್ರಹಿಸಿದ್ದಾರೆ.

Ad Widget . Ad Widget .

ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿರುವ ಅವರು, ‘ನಾಡಿನ ಹಾಗೂ ಹಿಂದೂಗಳ ಅತ್ಯಂತ ಪ್ರಮುಖ ಹಬ್ಬವಾಗಿರುವ ಗಣೇಶ ಚತುರ್ಥಿಯು ಈ ಬಾರಿ ಸೆ.19ರಂದು ಇರುವುದರಿಂದ ಸರಕಾರಿ ರಜೆಯನ್ನು ಅಂದೇ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

Ad Widget . Ad Widget .

ಈ ವರ್ಷದ ಸರಕಾರಿ ರಜೆಗಳ ಪಟ್ಟಿಯಲ್ಲಿ ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಪ್ರಕಟಿಸಲಾಗಿದೆ. ಆದರೆ ನಾಡಿನೆಲ್ಲೆಡೆ ಧಾರ್ಮಿಕವಾಗಿ ಸೆ.19 ರಂದು ಹಬ್ಬದ ಆಚರಣೆ ಇರುವುದರಿಂದ ಆ ದಿನವನ್ನು ಕರ್ತವ್ಯದ ದಿನ ಎಂದು ಪರಿಗಣಿಸಿದರೆ ಹಬ್ಬದ ಸಂಭ್ರಮವನ್ನೇ ಕಸಿದುಕೊಂಡಂತಾಗುತ್ತದೆ’ ಎಂದು ತಿಳಿಸಿದ್ದಾರೆ.

‘ಸದಾ ಹಿಂದೂಗಳ ಹಬ್ಬದ ವಿಷಯದಲ್ಲಿ ಏಕಪಕ್ಷೀಯವಾಗಿ ವರ್ತಿಸುವ ಕಾಂಗ್ರೆಸ್ ತನ್ನ ಹಳೆಯ ಜಾಯಮಾನವನ್ನು ಬಿಟ್ಟು ಗಣೇಶ ಚತುರ್ಥಿ ರಜೆಯನ್ನು ಸೆ.19 ರಂದೇ ನೀಡಿ ಎಲ್ಲರೂ ಕುಟುಂಬದ ಜೊತೆಗೂಡಿ ಸಂಭ್ರಮದಿಂದ ಹಬ್ಬ ಆಚರಿಸಲು ಅನುಕೂಲ ಕಲ್ಪಿಸಿಕೊಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಆಗ್ರಹಿಸುತ್ತಿದ್ದೇನೆ’ ಎಂದು ಶಾಸಕರು ಹೇಳಿದ್ದಾರೆ.

ರಜೆಯ ಗೊಂದಲ ಕರ್ನಾಟಕದ ಕರಾವಳಿ ಭಾಗದಲ್ಲಿ ಗಣೇಶ ಚತುರ್ಥಿ ರಜೆಯ ಬಗ್ಗೆ ಚರ್ಚೆಗಳು ಜೋರಾಗಿವೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 19ರ ಮಂಗಳವಾರ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತದೆ. ಆದರೆ ಸರ್ಕಾರಿ ರಜೆ ಸೆಪ್ಟೆಂಬರ್ 18ರಂದು ಇದೆ. ಗೌರಿ ತದಿಗೆಯ ದಿನ ರಜೆ ತೆಗೆದುಕೊಂಡು ಗಣೇಶ ಚೌತಿಯ ದಿನ ಕೆಲಸ ಮಾಡಬೇಕೆ? ಎಂಬುದು ಜನರ ಪ್ರಶ್ನೆಯಾಗಿದೆ.

Leave a Comment

Your email address will not be published. Required fields are marked *