ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ

ಸಮಗ್ರ ನ್ಯೂಸ್: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

Ad Widget ... ..

ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

Ad Widget

Leave a Comment

Your email address will not be published. Required fields are marked *