ಸಮಗ್ರ ನ್ಯೂಸ್: ಕಾರು, ಟಿಪ್ಪರ್, ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ನಡೆದಿದೆ.
ಮೃತಪಟ್ಟವರನ್ನು ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಎಂದು ಗುರುತಿಸಲಾಗಿದೆ. ಬೈಕಿನಲ್ಲಿದ 1 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದು ಪವಾಡ ಸದೃಶವಾಗಿ ಸಾವಿನಿಂದ ಪಾರಾಗಿದೆ.

ಈ ದಂಪತಿ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದು, ಹಿರೇಗೌಜ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಸಖರಾಯಪಟ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.