ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ, ಮುಂದಿನ ಹದಿನೈದು ದಿನಗಳ ಕಾಲ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸೂಚನೆ ನೀಡಲಾಗಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸರ್ವಪಕ್ಷ ಸಭೆ ಕರೆದಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12. 30 ಕ್ಕೆ ಈ ತುರ್ತು ಸಭೆ ನಡೆಯಲಿದ್ದು, ರಾಜ್ಯದ ಎಲ್ಲಾ ಪಕ್ಷಗಳ ಮುಖ್ಯಮಂತ್ರಿಗಳು, ರಾಜ್ಯಸಭಾ ಸದಸ್ಯರು, ಸಂಸದರನ್ನು ಈ ಸಭೆಗೆ ಆಹ್ವಾನಿಸಲಾಗಿದೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಎಂಬುದು ಈ ಸಭೆಯಲ್ಲಿ ನಿರ್ಣಯವಾಗುವ ಸಾಧ್ಯತೆ ಇದೆ.