ಸಮಗ್ರ ನ್ಯೂಸ್: ಗುರುವಾರ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಆರೋಪಿ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ʼಇಂದಿರಾ ಕ್ಯಾಂಟಿನ್ ಬಿಲ್ ಗೂ ಈ ಪ್ರಕರಣಕ್ಕೆ ಸಂಬಂಧ ಇದೆ ಎಂದಿದ್ದರು. ಆದರೆ ಇದೀಗ ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಆರೋಪಿ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ʼʼಇಂದಿರಾ ಕ್ಯಾಂಟಿನ್ ಬಿಲ್ ಬಾಕಿ ಇರೋ ಕಾರಣ ಷಡ್ಯಂತ್ರ ರಚನೆ ಮಾಡಲಾಗಿದೆʼ ಎಂದು ಆರೋಪ ಮಾಡಿದ್ದಳು. ಈ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ʼʼಇಂದಿರಾ ಕ್ಯಾಂಟಿನ್ ಬಿಲ್ ಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲʼʼ ಎಂದು ತಿಳಿಸದರು.
ʼʼನನಗೆ ಬಂದ ಮಾಹಿತಿ ಪ್ರಕಾರ ಟಿಕೆಟ್ ಕೊಡಿಸುವುದಾಗಿ ಹಣ ಪಡೆದಿದ್ದಾರೆ. 3.5 ಕೋಟಿ ರೂಪಾಯಿ ಹಣ ಪಡೆದಿರುವ ಬಗ್ಗೆ ದೂರು ದಾಖಲಾಗಿದೆ. ಸಿಸಿಬಿ ಪೊಲೀಸರ ತನಿಖೆ ಬಳಿಕ ಉಳಿದ ವಿಚಾರ ಗೊತ್ತಾಗಲಿದೆʼʼ ಎಂದು ಹೇಳಿದರು.
ʼʼಈ ಕೇಸ್ನಲ್ಲಿ ಸ್ವಾಮೀಜಿ ಭಾಗಿಯಾಗಿದ್ದರೆ ಅವರ ಬಂಧನವೂ ಆಗುತ್ತೆ. ಯಾರೇ ತಪ್ಪು ಮಾಡಿದರೂ ಕೂಡ ಕಾನೂನಿನಡಿ ಕ್ರಮ ಆಗಲಿದೆ. ಚೈತ್ರಾ ಕುಂದಾಪುರ ಭಾಷಣ ಮತ್ತು ಈ ಪ್ರಕರಣವನ್ನು ತಳಕು ಹಾಕುವುದು ಬೇಡʼʼ ಎಂದರು.