ಸಮಗ್ರ ನ್ಯೂಸ್: ಮುಜರಾಯಿ ಇಲಾಖೆ ದೇವಸ್ಥಾನಗಳಿಗೆ ಏಕಾಏಕಿ ಹೊಸ ರೂಲ್ಸ್ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಸ್ಥಾನಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಕಡ್ಡಾಯವಾಗಿನಿಷೇಧಿಸಲಾಗಿದೆ ಎಂದು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ಇಲಾಖೆ, ದೇವಸ್ಥಾನದ ಆಸುಪಾಸು ದೈವಿಕಳೆ ಇರುವುದರಿಂದ ಅಲ್ಲಿ ಶುದ್ಧವಾಗಿ ಇರುವುದು ತುಂಬಾ ಮುಖ್ಯ. ಹಾಗೂ ಅಲ್ಲಿ ಪೂರಕವಾದ ವಾತಾವರಣ ಸೃಷ್ಟಿ ಮಾಡಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಧರ್ಮ ಎಂದರೆ ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ, ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ಕ್ಷೇತ್ರಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.
ಮುಜುರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ.
ಹಿಂದೂ ದೇವಾಲಯಗಳ ಪಾವಿತ್ರ್ಯತೆ ಮತ್ತು ಶುದ್ಧತೆ ಕಾಪಾಡಲು ಸರ್ಕಾರ ಹೊಸ ಹೆಜ್ಜೆ ಇರಿಸಿದೆ, ಅದರಂತೆ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕುಗಳ ಬಳಕೆ, ಮಾರಾಟ ಬಂದ್ ಆಗಲಿದೆ.