Ad Widget .

ಮೂಡುಬಿದಿರೆ: ಅ.6 ಮತ್ತು 7 ರಂದು ‘ಆಳ್ವಾಸ್ ಪ್ರಗತಿ -2023’ ಉದ್ಯೋಗ ಮೇಳ| ಪ್ರತಿಭಾನ್ವಿತರಿಗೆ ಸಿಗಲಿದೆ ಹಲವು ಉದ್ಯೋಗ

ಸಮಗ್ರ ನ್ಯೂಸ್: ಮೂಡುಬಿದಿರೆಯ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್‌ 6 ಮತ್ತು 7ರಂದು ‘ಆಳ್ವಾಸ್‌ ಪ್ರಗತಿ 2023’ ಉದ್ಯೋಗ ಮೇಳ ಮೂಡಬಿದಿರೆಯ ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಕಾಲೇಜಿನಲ್ಲಿ ನಡೆಯಲಿದೆ. ‌

Ad Widget . Ad Widget .

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಈ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಕುರಿಯನ್‌, ‘ಗ್ರಾಮೀಣ ಭಾಗದ ಪ್ರತಿಭಾನ್ವಿತ ಯುವಕರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವ ಉದ್ದೇಶದಿಂದ ಪ್ರತಿಷ್ಠಾನವು ಉದ್ಯೋಗ ಮೇಳ ಆಯೋಜಿಸುತ್ತಾ ಬಂದಿದೆ.ಈ ವರ್ಷ 13ನೇ ಆವೃತ್ತಿಯ ಮೇಳ ನಡೆಯಲಿದೆ’ ಎಂದು ತಿಳಿಸಿದರು.

Ad Widget . Ad Widget .

‘ಐಟಿ, ತಯಾರಿಕೆ, ಮಾರಾಟ, ಚಿಲ್ಲರೆ ವ್ಯಾಪಾರ, ಆತಿಥ್ಯ, ಟೆಲಿಕಮ್ಯುನಿಕೇಷನ್‌, ಆರೋಗ್ಯ, ಮಾಧ್ಯಮ, ನಿರ್ಮಾಣ, ಶಿಕ್ಷಣ, ಎನ್‌ಜಿಒ ಮುಂತಾದ ವಲಯಗಳ ದೇಶಿ ಮತ್ತು ವಿದೇಶಿ ಕಂಪನಿಗಳು ಪಾಲ್ಗೊಳ್ಳಲಿವೆ. ವಿವಿಧ ಪದವಿ, ಸ್ನಾತಕೋತ್ತರ ಪದವಿ, ವೈದ್ಯಕೀಯ, ಅರೆ ವೈದ್ಯಕೀಯ, ಎಂಜಿನಿಯರಿಂಗ್‌, ಆಡಳಿತ ನಿರ್ವಹಣೆ, ಮೂಲ ವಿಜ್ಞಾನ, ನರ್ಸಿಂಗ್‌, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್ಸೆಸ್ಸೆಲ್ಸಿ ಶಿಕ್ಷಣ ಪೂರೈಸಿದ ಆಕಾಂಕ್ಷಿಗಳು ಭಾಗವಹಿಸಬಹುದು. ಕಂಪನಿಗಳ ವಿವರ ಹಾಗೂ ಇತರ ಮಾಹಿತಿಯನ್ನು www.alvaspragati.com ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಕಡ್ಡಾಯವಾಗಿ http://alvaspragati.com/CandidateRegistrationPage ನಲ್ಲಿ ನೋಂದಣಿ ಮಾಡಬೇಕು’ ಎಂದು ಅವರು ತಿಳಿಸಿದರು.

ಪ್ರತಿಷ್ಠಾನದ ಟ್ರಸ್ಟಿ ವಿವೇಕ್‌ ಆಳ್ವ ಮಾತನಾಡಿ, ‘ಉದ್ಯೋಗ ಮೇಳ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ವಸತಿ, ಊಟ ಮುಂತಾದ ಸೌಲಭ್ಯ ಹಾಗೂ ಐಟಿಐ ಅಭ್ಯರ್ಥಿಗಳಿಗೆ ಬಸ್‌ ಸೌಲಭ್ಯವನ್ನೂ ಪ್ರತಿಷ್ಠಾನದ ವತಿಯಿಂದ ಕಲ್ಪಿಸಲಾಗುತ್ತದೆ. ಹೊರಜಿಲ್ಲೆಗಳ ಅಭ್ಯರ್ಥಿಗಳಿಗೆ ಅ. 5ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿರುವ ಸಂಖ್ಯೆ/ಐಡಿಯನ್ನು ತರಬೇಕು. ಅಂಕಪಟ್ಟಿ, ಪ್ರಮಾಣಪತ್ರಗಳ ಜೆರಾಕ್ಸ್‌ ಪ್ರತಿ, ಪಾಸ್‌ಪೋರ್ಟ್‌ ಅಳತೆಯ 5ರಿಂದ 10 ಭಾವಚಿತ್ರ ತರಬೇಕು. ಬೆಳಿಗ್ಗೆ 8ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳುತ್ತದೆ’ ಎಂದು ಮಾಹಿತಿ ನೀಡಿದರು.

‘ಈವರೆಗೆ 112 ಕಂಪನಿಗಳು ನೋಂದಾಯಿಸಿಕೊಂಡಿದ್ದು, ಇನ್ನೂ 97 ಕಂಪನಿಗಳು ಬರುವ ನಿರೀಕ್ಷೆ ಇದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು: 90089 07716, 96631 90590, 79752 23865 ಅಥವಾ 97414 40490 ಮತ್ತು ಕಂಪನಿಗಳು: 89712 50414 ಸಂಪರ್ಕಿಸಬಹುದು’ ಎಂದು ಅವರು ತಿಳಿಸಿದರು.

ಪ್ರತಿಷ್ಠಾನದ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ಸುಶಾಂತ್‌ ಅನಿಲ್‌ ಲೋಬೊ, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ಇದ್ದರು.

Leave a Comment

Your email address will not be published. Required fields are marked *