ಮಂಗಳೂರು: ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್

ಸಮಗ್ರ ನ್ಯೂಸ್: .ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget ... ..

ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

Ad Widget

ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *