ಗಣೇಶ ಚತುರ್ಥಿ ಹಿನ್ನಲೆ| ಕರಾವಳಿ ಜಿಲ್ಲೆಗಳಿಗೆ ಸೆ.19 ರಂದು ರಜೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

ಸಮಗ್ರ ನ್ಯೂಸ್: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Ad Widget ... ..

ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಒತ್ತಡ ಹಾಕಲಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

Ad Widget

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.

Leave a Comment

Your email address will not be published. Required fields are marked *