Ad Widget .

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ಪ್ರಕ್ರಿಯೆಗೆ ಕೊನೆ ದಿನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ -HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಂಡು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Ad Widget . Ad Widget .

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17 ಈ ಪ್ರಕ್ರಿಯೆಗೆ ಕೊನೆಯ ದಿನವಾಗಿದೆ.

Ad Widget . Ad Widget .

ಕೆಲವು ಕಡೆ ನಕಲಿಯಾಗಿ HSRP ಅಳವಡಿಸುತ್ತಿದ್ದು, ಇದನ್ನು ತಡೆಯುವ ಉದ್ದೇಶದಿಂದ ಅಧಿಕೃತ HSRP ನಂಬರ್ ಪ್ಲೇಟ್ ಅಳವಡಿಸುವ ಪಟ್ಟಿಯನ್ನು ಸಾರಿಗೆ ಇಲಾಖೆ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.

www.transport.karnataka.gov.in ಅಥವಾ www.siam.in ವೆಬ್ಸೈಟ್ ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. HSRP ಅಳವಡಿಸುವ ಡೀಲರ್ ಗಳ ಮಾಹಿತಿ ಲಭ್ಯವಾಗಲಿದ್ದು, ತಮಗೆ ಅನುಕೂಲವಾಗುವ ಸ್ಥಳದ ಆಯ್ಕೆ ಮಾಡಿಕೊಂಡು ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬಹುದು. HSRP ನಂಬರ್ ಪ್ಲೇಟ್ ಇಲ್ಲದಿದ್ದರೆ ವಾಹನ ಮಾರಿದರೆ ಅದರ ಮಾಲೀಕತ್ವ ಬದಲಾವಣೆ, ವಿಳಾಸ ಬದಲಾವಣೆ, ಅರ್ಹತಾ ಪತ್ರ, ನವೀಕರಣ ಮೊದಲಾದ ಸೇವೆ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *