Ad Widget .

ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಗೋವುಗಳ ರಕ್ಷಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು

ಸಮಗ್ರ ನ್ಯೂಸ್: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ.

Ad Widget . Ad Widget .

ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು ಕ್ಯಾಂಟರ್ ವಾಹನವನ್ನು ಸೀಜ್ ಮಾಡಿ ಅದರಲ್ಲಿದ್ದ 11 ಹಸುಗಳ ರಕ್ಷಣೆ ಮಾಡಿದ್ದಾರೆ. ಅಲ್ಲದೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *