ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಗಣೇಶ ಹಬ್ಬದ ಸಲುವಾಗಿ ಸಾರ್ವತ್ರಿಕ ರಜಾ ದಿನವನ್ನು ಮೂರು ಜಿಲ್ಲೆಗಳನ್ನು ಹೊರತುಪಡಿಸಿ, ಒಂದೇ ದಿನ ಸರ್ಕಾರಿ ರಜೆಯನ್ನು ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆ ಹೊರತು ಪಡಿಸಿ, ನಾಳೆ ಗಣೇಶ ಹಬ್ಬಕ್ಕೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ. ಗಣೇಶ ಚತುರ್ಥಿಗೆ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 18ರ (ಸೋಮವಾರ) ಬದಲು ಸೆಪ್ಟೆಂಬರ್ 19 (ಮಂಗಳವಾರ) ರಂದು ರಜೆ ನೀಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.