Ad Widget .

ಬಂಟ್ವಾಳ:ಕುಸಿದು ಬಿದ್ದು ಬಿಜೆಪಿ ಕಾರ್ಯಕರ್ತ ಮೃತ್ಯು

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Ad Widget . Ad Widget .

ಪ್ರಕಾಶ್ ಬೆಳ್ಳೂರು(43) ಅವರು ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಔಷಧಿಗೆಂದು ಸೆ.18ರಂದು ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು. ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಸಹಿತ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *