ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ಸಭೆಯಲ್ಲಿ ಮತ್ತೊಮ್ಮೆ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದ್ದು, ಮತ್ತೆ ಐದು ಸಾವಿರ ಕ್ಯೂಸೆಕ್ ನೀರು ಬಿಡಲು ಸಮಿತಿ ಆದೇಶ ನೀಡಿದೆ.
ಸೆಪ್ಟೆಂಬರ್ 15ರಂದು ನಡೆದ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿದ್ದ, ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ನೀರಿನ ಸಮಸ್ಯೆಯಿಂದಾಗಿ ತಮ್ಮ ಭತ್ತದ ಕೃಷಿಗೆ ತೊಂದರೆ ಉಂಟಾಗುತ್ತಿದ್ದು, ಹೆಚ್ಚಿನ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಮನವಿ ಮಾಡಿತ್ತು. ಮನವಿಯನ್ನು ಪುರಸ್ಕರಿಸಿದ ಸಮಿತಿ, ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.
ಈಗಾಗಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರ ಕಾವೇರಿದ್ದು, ಈ ಆದೇಶದಿಂದ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.