ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ.
ಪ್ರಸ್ತುತ ಶಕ್ತಿ ಯೋಜನೆ” ಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜುಲೈ-2023 ರಿಂದ ಮುಂದುವರೆದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತೆ ಹೆಚ್ಚುವರಿ ವೇತನವನ್ನು (ಪಾವತಿಸುವುದು ಹಾಗೂ ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಸಿಬ್ಬಂದಿಗಳನ್ನು ಕರ್ತವ್ಯದ ಮೇಲೆ ನಿಯೋಜಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.
ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ನಿಗಮದ ಸಾರಿಗೆ ಆದಾಯ ಹಾಗೂ ಇತರ ಆದಾಯವು ಕುಂಠಿತವಾಗಿದ್ದ ಹಿನ್ನೆಲೆಯಲ್ಲಿ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನಗಳನ್ನು ನೀಡಲಾಗಿತ್ತು.