Ad Widget .

ಗಣೇಶ ಚತುರ್ಥಿ ಹಿನ್ನೆಲೆ| ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ.

Ad Widget . Ad Widget .

ಆದೇಶದಲ್ಲಿ ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ 18-09-2023ರಂದು ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ. ಗಣಪತಿ ವಿಸರ್ಜನೆಗೆ ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್ಗಳ ಸ್ಥಾಪನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 418 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.

Ad Widget . Ad Widget .

ಸದರಿ ವ್ಯವಸ್ಥೆಯ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅದರ ವಿವರಗಳಿಗಾಗಿ ವೆಬ್ ಸೈಟ್ https://apps.bbmpgov.in/ganesh2023/ ನಲ್ಲಿ ಅಥವಾ ಬಿಬಿಎಂಪಿ ಸಹಾಯವಾಣಿ 1533ಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ. ಸದರಿ ಮಾಹಿತಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳಕೆ ಮಾಡಿಕೊಳ್ಳಬಹುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment

Your email address will not be published. Required fields are marked *